×
Ad

ಗುಪ್ತಚರ ಎಡಿಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

Update: 2024-09-13 19:19 IST

 ಹೇಮಂತ್ ನಿಂಬಾಳ್ಕರ್

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಹಾಗೂ ಗುಪ್ತಚರ ವಿಭಾಗದ ಎಡಿಜಿಪಿ ಕೆ.ವಿ.ಶರತ್ ಚಂದ್ರ ಅವರನ್ನು ಶುಕ್ರವಾರ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ.

ಹೇಮಂತ್ ನಿಂಬಾಳ್ಕರ್ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೇ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆಯನ್ನು ವಹಿಸಲಾಗಿದೆ.

ಗುಪ್ತಚರ ವಿಭಾಗದ ಎಡಿಜಿಪಿಯಾಗಿರುವ ಕೆ.ವಿ.ಶರತ್ ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೇ, ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News