ಸಿಎಂಗೆ ಹೈಕಮಾಂಡ್ ಕರೆ?: “ನನಗೆ ಮಾಹಿತಿ ಇಲ್ಲ” ಎಂದ ಡಿ.ಕೆ. ಶಿವಕುಮಾರ್
Update: 2026-05-25 07:17 IST
Photo: x.com/EnglishSalar
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಬರುವಂತೆ ಹೈಕಮಾಂಡ್ ನಾಯಕರು ಕರೆದಿರುವ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ನಾನು ಈಗಷ್ಟೇ ಸಭೆ ಮುಗಿಸಿಕೊಂಡು ಬಂದಿದ್ದೇನೆ. ಈ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ” ಎಂದು ಪ್ರತಿಕ್ರಿಯಿಸಿದರು.
ರಾಜ್ಯಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಥವಾ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸಲು ಸಿಎಂ ಅವರನ್ನು ದೆಹಲಿಗೆ ಕರೆದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನನಗೆ ಗೊತ್ತಿಲ್ಲ” ಎಂದರು.