×
Ad

ಚುನಾಯಿತ ಸದಸ್ಯರ ಅವಧಿ ಪೂರ್ಣಗೊಳ್ಳುವವರೆಗೆ ಆಡಳಿತಾಧಿಕಾರಿ ನೇಮಕ ಬೇಡ; ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ಮಂಡ್ಯ, ಹೊಸಕೋಟೆ, ಚಿತ್ರದುರ್ಗ, ಗೌರಿಬಿದನೂರು ನಗರಸಭೆಗಳ ಚುನಾಯಿತ ಸದಸ್ಯರು ಸಲ್ಲಿಸಿದ್ದ ಅರ್ಜಿ

Update: 2025-10-16 19:34 IST

ಬೆಂಗಳೂರು : ಮಂಡ್ಯ, ಹೊಸಕೋಟೆ, ಚಿತ್ರದುರ್ಗ ಹಾಗೂ ಗೌರಿಬಿದನೂರು ನಗರಸಭೆಗಳ ಚುನಾಯಿತ ಸದಸ್ಯರ ಅವಧಿ ಪೂರ್ಣಗೊಳ್ಳುವವರೆಗೆ ಆ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಮಧ್ಯಂತರ ನಿರ್ದೇಶನ ನೀಡಿದೆ.

ನಾಲ್ಕೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹೊಸದಾಗಿ ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಗುರುವಾರ ವಿಚಾರಣೆ ನಡೆಸಿತು.

ಕೆಲ ಕಾಲ ಆರ್ಜಿ ಆಲಿಸಿದ ನ್ಯಾಯಪೀಠ, ನ್ಯಾಯಾಲಯದ ಮುಂದೆ ಬಂದಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಅವಧಿ ಮುಗಿಯುವ ತನಕ ಆಡಳಿತಾಧಿಕಾರಿಗಳನ್ನು ನೇಮಕ ಮಾಡಬಾರದು ಎಂದು ಸರಕಾರಕ್ಕೆ ನಿರ್ದೇಶನ ನೀಡಿತು. ಜತೆಗೆ, ಅರ್ಜಿಗಳ ಸಂಬಂಧ ರಾಜ್ಯ ಸರಕಾರ, ರಾ‍ಜ್ಯ ಚುನಾವಣಾ ಆಯೋಗ, ಆಯಾ ಜಿಲ್ಲಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿತು.

ಈಗ ಹೊಸದಾಗಿ ಅರ್ಜಿ ಸಲ್ಲಿಸಿರುವ ನಾಲ್ಕು ನಗರ ಸ್ಥಳೀಯ ಸಂಸ್ಥೆಗಳು ಸೇರಿ ಈ ಹಿಂದೆ ಅರ್ಜಿ ಸಲ್ಲಿಸಿ ಆಡಳಿತಾಧಿಕಾರಿ ನೇಮಕ ಮಾಡಬಾರದು ಎಂದು ಮಧ್ಯಂತರ ಆದೇಶ ಪಡೆದುಕೊಂಡಿರುವ ಚಳ್ಳಕೆರೆ,‌ ಮುಳಬಾಗಿಲು, ಚಿಕ್ಕಬಳ್ಳಾಪುರ ನಗರಸಭೆಗಳು ಹಾಗೂ ಹೊಳೆನರಸೀಪುರ ಮತ್ತು ಮಳವಳ್ಳಿ ಪುರಸಭೆಗಳ ಅರ್ಜಿಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಸರಕಾರದ ಪರ ವಕೀಲರಿಗೆ ನಿರ್ದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮಂದೂಡಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News