×
Ad

ಆರು ವಕೀಲರಿಗೆ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆ; ಕೇಂದ್ರಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು

Update: 2026-06-04 00:23 IST

ಬೆಂಗಳೂರು: ಕೇಂದ್ರ ಸರ್ಕಾರದ ಉಪ ಸಾಲಿಸಿಟರ್‌ ಜನರಲ್‌ ಆಗಿರುವ ಎಚ್‌. ಶಾಂತಿಭೂಷಣ್‌ ಸೇರಿದಂತೆ ಆರು ವಕೀಲರನ್ನು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಸುಪ್ರೀಂಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿದೆ.

ಮಂಗಳವಾರ (ಜೂನ್ 2) ನಡೆದ ಕೊಲಿಜಿಯಂ ಸಭೆಯಲ್ಲಿ ವಕೀಲರಾದ ರಾಘವೇಂದ್ರ ಸೀತಾರಾಂ ಶ್ರೀವಾತ್ಸವ, ಹೇಮಾ ಕುಲಕರ್ಣಿ, ಸುಬ್ರಮಣ್ಯ ರಂಗಾರಾವ್‌, ಟಿ.ಪಿ.‌ ವಿವೇಕಾನಂದ, ಬಿ. ಪ್ರಮೋದ್‌ ಹಾಗೂ ಎಚ್. ಶಾಂತಿಭೂಷಣ್‌ ಅವರ ಹೆಸರುಗಳನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

ಇತ್ತೀಚೆಗೆ ಮೂವರು ಅಧಿಕಾರಿಗಳನ್ನು ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದ್ದು, ಅವರು ಸೋಮವಾರ (ಜೂನ್ 1) ಪ್ರಮಾಣವಚನ ಸ್ವೀಕರಿಸಿದ್ದರು.

ರಾಜ್ಯ ಹೈಕೋರ್ಟ್‌ಗೆ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳು ಮಂಜೂರಾಗಿದ್ದು, ಸದ್ಯ 48 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಶಿಫಾರಸುಗೊಂಡಿರುವ ವಕೀಲರ ಹೆಸರುಗಳಿಗೆ ಅನುಮೋದನೆ ದೊರೆತರೆ ನ್ಯಾಯಮೂರ್ತಿಗಳ ಸಂಖ್ಯೆ 54ಕ್ಕೆ ಏರಿಕೆಯಾಗಲಿದೆ.

ಉಪ ಸಾಲಿಸಿಟರ್ ಜನರಲ್ ಆಗಿರುವ ಎಚ್‌. ಶಾಂತಿಭೂಷಣ್‌ ಅವರು ಸದ್ಯ ಕರ್ನಾಟಕ ಹೈಕೋರ್ಟ್‌ನಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿ‌ನಿಧಿಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News