×
Ad

ವಿಚಾರಣೆ ರದ್ದು ಕೋರಿಕೆ: ಮುರುಘಾ ಶರಣರ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

Update: 2023-07-11 22:38 IST

ಬೆಂಗಳೂರು, ಜು.11: ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಜು.20ಕ್ಕೆ ಮುಂದೂಡಿದೆ.

ಅಲ್ಲಿಯವರೆಗೂ ಶರಣರ ವಿರುದ್ಧದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ, ಧಾರ್ಮಿಕ ಸಂಸ್ಥೆಗಳ (ದುರ್ಬಳಕ ತಡೆ) ಕಾಯ್ದೆಯ ಮತ್ತು ಸಾಕ್ಷ್ಯ ನಾಶ ಆರೋಪ ಕುರಿತ ಸೆಷನ್ಸ್ ಕೋರ್ಟ್ ವಿಚಾರಣೆಗೆ ನೀಡಲಾಗಿದ್ದ ತಡೆಯಾಜ್ಞೆ ವಿಸ್ತರಿಸಿ ಆದೇಶಿಸಿದೆ.

ಪೊಕ್ಸೋ, ಎಸ್‍ಸಿ-ಎಸ್‍ಟಿ ದೌರ್ಜನ್ಯ ತಡೆ ಕಾಯ್ದೆ, ಧಾರ್ಮಿಕ ಸಂಸ್ಥೆಗಳ ದುರ್ಬಳಕೆ ತಡೆ ಕಾಯ್ದೆಯಡಿ ಮತ್ತು ಸಾಕ್ಷ್ಯ ನಾಶ ಸೇರಿ ಇನ್ನಿತರ ಆರೋಪಗಳ ಸಂಬಂಧ ತಮ್ಮ ವಿರುದ್ಧ ದಾಖಲಾಗಿದ್ದ ದೋಷಾರೋಪ ಪಟ್ಟಿ ಮತ್ತು ಆ ಕುರಿತ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಿಚಾರಣೆ ರದ್ದುಪಡಿಸುವಂತೆ ಕೋರಿ ಮುರುಘಾ ಶರಣರು ಹೈಕೋರ್ಟ್‍ಗೆ ನಾಲ್ಕು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠಕ್ಕೆ, ಶರಣರ ಪರ ವಕೀಲರು ಮತ್ತು ಪೊಲೀಸರ ಪರ ಸರಕಾರಿ ವಕೀಲರು ಹಾಜರಾಗಿ ವಾದ ಮಂಡನೆಗೆ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ, ಜು. 20ಕ್ಕೆ ಅರ್ಜಿಗಳ ವಿಚಾರಣೆ ಮುಂದೂಡಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News