×
Ad

ಜಾತಿ ನಿಂದನೆ ಪ್ರಕರಣ:‌ ಸಚಿವ ಡಿ.ಸುಧಾಕರ್ ವಿರುದ್ಧದ ಎಫ್‍ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

Update: 2023-09-15 19:13 IST

ಬೆಂಗಳೂರು, ಸೆ. 15: ಪರಿಶಿಷ್ಟ ಕುಟುಂಬದ ಜಮೀನು ಕಬಳಿಕೆ ಹಾಗೂ ಅವರ ಮೇಲೆ ದೌರ್ಜನ್ಯ ಎಸಗಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ನಿಯಂತ್ರಣ ಕಾಯಿದೆ ಅಡಿಯಲ್ಲಿ ದಾಖಲಾಗಿದ್ದ ಎಫ್‍ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಎಫ್‍ಐಆರ್ ರದ್ದುಪಡಿಸುವಂತೆ ಕೋರಿ ಸೆವೆನ್ ಹಿಲ್ಸ್ ಡೆವಲಪರ್ಸ್ ಅಂಡ್ ಟ್ರೇಡರ್ಸ್‍ನ ನಿರ್ದೇಶಕರೂ ಆಗಿರುವ ಡಿ.ಸುಧಾಕರ್ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿತು.

ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸರಕಾರಕ್ಕೆ ತುರ್ತು ನೊಟೀಸ್ ಜಾರಿ ಮಾಡಿ ವಿಚಾರಣೆಯನ್ನು ಅ.3ಕ್ಕೆ ಮುಂದೂಡಿತು.

ಪ್ರಕರಣವೇನು?: ಸೆವೆನ್ ಹಿಲ್ಸ್ ಡೆವಲಪರ್ಸ್ ಅಂಡ್ ಟ್ರೇಡರ್ಸ್, ಸಚಿವ ಡಿ.ಸುಧಾಕರ್, ಜಿ.ಶ್ರೀನಿವಾಸ್ ಮತ್ತು ಭಾಗ್ಯಮ್ಮ ಎಂಬುವರು ತಮ್ಮ ಕುಟುಂಬದವರಿಗೆ ಮೋಸ ಮಾಡಿ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಈ ಸಂಬಂಧ ನಗರದ ಸಿವಿಲ್ ನ್ಯಾಯಾಲಯ ಮತ್ತು ಹೈಕೋರ್ಟ್‍ನಲ್ಲಿ ಪ್ರಕರಣದ ವಿಚಾರಣಾ ಹಂತದಲ್ಲಿದೆ.

ಹೀಗಿದ್ದರೂ, ಡಿ.ಸುಧಾಕರ್ ಸೇರಿದಂತೆ ಮತ್ತಿತರರು ತಾವು ನೆಲೆಸಿರುವ ಮನೆಗಳನ್ನು ತೆರವುಗೊಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿ ಪ್ರಶ್ನಿಸಿದಾಗ ಸುಮಾರು 35ಕ್ಕೂ ಹೆಚ್ಚು ಮಂದಿ ತಮ್ಮ ವಿರುದ್ಧ ದೌರ್ಜನ್ಯ ನಡೆಸಿದ್ದಾರೆ. ಮಗಳ ಮೇಲೆ ಹಲ್ಲೆ ನಡೆಸಿ, ಜಾತಿ ಉಲ್ಲೇಖಿಸಿ ನಿಂದಿಸಿದ್ದಾರೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯಲಹಂಕ ನಿವಾಸಿ ಸುಬ್ಬಮ್ಮ ಎಂಬುವರು ಸೆ.10ರಂದು ಯಲಹಂಕ ಪೆÇಲೀಸ್ ಠಾಣೆಗೆ ದೂರು ದಾಖಲಿಸಿದ್ದರು.

ಇದನ್ನು ಆಧರಿಸಿ ಪೆÇಲೀಸರು ಪರಿಶಿಷ್ಟ ಜಾತಿ ಮತ್ತು ಪಂಗಡ (ದೌರ್ಜನ್ಯ ತಡೆ) ಕಾಯಿದೆ ಮತ್ತು ಐಪಿಸಿಯ ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಿದ್ದರು. ಇದನ್ನು ಪ್ರಶ್ನಿಸಿ ಸುಧಾಕರ್ ಮತ್ತಿತರರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News