×
Ad

ಭಾರತದಲ್ಲಿರುವ ಪಾಕಿಸ್ತಾನಿಯರನ್ನು ಸ್ವದೇಶಕ್ಕೆ ಕಳಿಸುವ ವಿಚಾರ: ಕೇಂದ್ರ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2025-05-06 21:46 IST

ಕರ್ನಾಟಕ ಹೈಕೋರ್ಟ್‌ (PTI)

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಗುಂಡಿನ ದಾಳಿಯ ಬಳಿಕ ಭಾರತದಲ್ಲಿರುವ ಎಲ್ಲ ಪಾಕಿಸ್ತಾನದ ಪ್ರಜೆಗಳು ದೇಶ ತೊರೆಯಬೇಕೆಂಬ ಕೇಂದ್ರ ಸರಕಾರದ ನಿರ್ದೇಶನದಿಂದ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ ತಾಯಿ ಮತ್ತು ಪಾಕಿಸ್ತಾನದ ತಂದೆಗೆ ಜನಿಸಿದ ಪಾಕಿಸ್ತಾನದ ಮೂವರು ಮಕ್ಕಳು ಸಲ್ಲಿಸಿದ್ದ ಅರ್ಜಿ ಕುರಿತು ಕೇಂದ್ರ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ತಮ್ಮ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ರಾಜ್ಯ, ಕೇಂದ್ರ ಸರಕಾರಗಳಿಗೆ ನಿರ್ದೇಶನ ಕೋರಿ ಪಾಕಿಸ್ತಾನದ ಬಲೂಚಿಸ್ತಾನದ 8 ವರ್ಷದ ಬಿಬಿ ಯಾಮಿನಾ, 4 ವರ್ಷದ ಮುಹಮ್ಮದ್ ಮುದಸ್ಸಿರ್ ಮತ್ತು 3 ವರ್ಷದ ಮುಹಮ್ಮದ್ ಯೂಸಫ್ ಎಂಬವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ರಜಾ ಕಾಲದ ಪೀಠ, ಆಕ್ಷೇಪಣೆ ಸಲ್ಲಿಸಲು ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿ ಮಾಡಿ ವಿಚಾರಣೆಯನ್ನು ಮೇ 8ಕ್ಕೆ ಮುಂದೂಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News