×
Ad

ಹೈಕೋರ್ಟ್: ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

Update: 2023-09-21 22:15 IST

ಬೆಂಗಳೂರು, ಸೆ. 21: ರಾಜ್ಯ ಹೈಕೋರ್ಟ್‍ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅನಂತ ರಾಮನಾಥ ಹೆಗಡೆ, ಕೆ.ಎಸ್.ಹೇಮಲೇಖಾ ಹಾಗೂ ಎಸ್.ರಾಚಯ್ಯ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ಗುರುವಾರ ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣ ವಚನ ಬೋಧಿಸಿದರು.

ಕಾರ್ಯಕ್ರಮದ ಸ್ವಾಗತವನ್ನು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ ಅವರು ನೆರವೇರಿಸಿದರು. ಸಮಾರಂಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು, ಹಿರಿಯ ವಕೀಲರು ಹಾಗೂ ವಕೀಲ ವೃಂದದ ಗಣ್ಯರು ಹಾಜರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News