×
Ad

ಡಿ.ರೂಪಾ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದತಿಗೆ ಹೈಕೋರ್ಟ್ ನಿರಾಕರಣೆ

Update: 2023-08-21 22:32 IST

ಬೆಂಗಳೂರು, ಆ.21: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಇದರಿಂದಾಗಿ ಡಿ.ರೂಪಾ ಅವರಿಗೆ ಹಿನ್ನಡೆಯಾಗಿದೆ.

ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಡಿ.ರೂಪಾ ಮೌದ್ಗಿಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಮೊಕದ್ದಮೆ ರದ್ದುಗೊಳಿಸಲು ನಿರಾಕರಿಸಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಹೈಕೋರ್ಟ್ ಆದೇಶದಿಂದಾಗಿ ರೂಪಾ ಮೌದ್ಗಿಲ್ ಪ್ರಕರಣದ ವಿಚಾರಣೆ ಎದುರಿಸಬೇಕಾದ ಅನಿವಾರ್ಯತೆ ಉಂಟಾಗಿದೆ.

ಡಿ.ರೂಪಾ ಅವರು ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟಾಗಿದೆ. ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕವಾಗಿ ನೋವುಂಟು ಮಾಡಿದೆ ಎಂದು ರೋಹಿಣಿ ಸಿಂಧೂರಿ ಖಾಸಗಿ ಮೊಕದ್ದಮೆ ಹೂಡಿದ್ದರು.

ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್, ಡಿ.ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಆದೇಶಿಸಿತ್ತು. ಜತೆಗೆ, ಡಿ.ರೂಪಾ ಅವರಿಗೆ ಸಮನ್ಸ್ ಜಾರಿ ಮಾಡಿತ್ತು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News