×
Ad

ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಅರ್ಜಿ‌ ವಿಚಾರಣೆ ಮುಕ್ತಾಯಗೊಳಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Update: 2024-05-31 21:13 IST

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಬಿಐ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಪ್ರಕರಣ ಸಂಬಂಧ ಸಲ್ಲಿಕೆಯಾದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ಉಮೇಶ್ ಎಂ. ಅಡಿಗ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸಿಬಿಐ ಪರವಾಗಿ ವಾದಿಸಿದ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ. ಪ್ರಸನ್ನ ಕುಮಾರ್ ಸಿಬಿಐ ಒಮ್ಮೆ ನೀಡಿದ ಸಮ್ಮತಿ ಹಿಂಪಡೆಯುವ ಅಧಿಕಾರ ಸರ್ಕಾರಕ್ಕಿಲ್ಲ. ಈಗಾಗಲೇ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಳಿಸಿದೆ. ಸಮ್ಮತಿ ಹಿಂಪಡೆದ ಕಾನೂನುಬಾಹಿರ, ಸರ್ಕಾರದ ಕ್ರಮ ರದ್ದುಪಡಿಸಲು ನ್ಯಾಯಪೀಠವನ್ನು ಮನವಿ ಮಾಡಿದರು. ವಾದ ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News