Photo credit: PTI

ಬೆಂಗಳೂರು: ಸಿನಿಮಾ ಹಾಗೂ ಸಾಂಸ್ಕೃತಿಕ ಕಾರ್ಯಕರ್ತರ ಕಲ್ಯಾಣ ಯೋಜನೆಗಳಿಗೆ ಅನುದಾನ ಒದಗಿಸಲು ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನೆಮಾ ಟಿಕೆಟ್ ದರದ ಮೇಲೆ ಕಡ್ಡಾಯ ಶೇ.2ರಷ್ಟು ಸೆಸ್ ಸಂಗ್ರಹಿಸುವ ಚಲನಚಿತ್ರ ‍ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ದಿ) ಕಾಯ್ದೆಗೆ ಹೈಕೋರ್ಟ್ ಎರಡು ವಾರಗಳ ತಡೆ ನೀಡಿದೆ..

ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿರುವ ಅರ್ಜಿ ವಿಚಾರಣೆಯನ್ನು ಇಂದು ಮುಂದುವರೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ಪೀಠ ಸರ್ಕಾರಕ್ಕೆ ಅಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಿ ಅಲ್ಲಿವರೆಗೂ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಅದೇಶ ಮಾಡಿತು.

ಸಿನಿಮಾ ಹಾಗೂ ಸಾಂಸ್ಕೃತಿಕ ಕಾರ್ಯಕರ್ತರ ಕಲ್ಯಾಣಕ್ಕೆ ಅನುದಾನ ಒದಗಿಸಲು ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನೆಮಾ ಟಿಕೆಟ್ ದರದ ಮೇಲೆ ಕಡ್ಡಾಯ ಶೇ. 2ರಷ್ಟು ಸೆಸ್ ಸಂಗ್ರಹಿಸುವ ಚಲನಚಿತ್ರ ‍ ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ದಿ) ಕಾಯಿದೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಈ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನೆ ಮಾಡಿ ಪಿವಿಆರ್ ಐನಾಕ್ಸ್ ವಿನಾಯಕ‌ ಚಿತ್ರಮಂದಿರ ಸೇರಿ ಹಲವರು ಹೈಕೋರ್ಟ್ ಮೆಟ್ಟಿಲೇರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor