×
Ad

ಯಲಹಂಕ ಕ್ಷೇತ್ರದ 4 ಪಶು ಚಿಕಿತ್ಸಾ ಕೇಂದ್ರಗಳ ಸ್ಥಳಾಂತರಕ್ಕೆ ಹೈಕೋರ್ಟ್ ತಡೆ

Update: 2023-12-28 22:09 IST

ಬೆಂಗಳೂರು: ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ 4 ಪಶು ಚಿಕಿತ್ಸಾ ಕೇಂದ್ರಗಳನ್ನು ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಿ ಸರಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಪಶು ಸಂಗೋಪನೆ ಇಲಾಖೆಯಿಂದ ಅವೈಜ್ಞಾನಿಕ ರೀತಿಯಲ್ಲಿ ಯಾವುದೇ ಅಧ್ಯಯನ ನಡೆಸದೆ ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಶು ಚಿಕಿತ್ಸಾ ಕೇಂದ್ರಗಳನ್ನು ಏಕಾಏಕಿ ಬೇರೆಡೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ವಕೀಲರ ವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠವು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಅವುಗಳನ್ನು ಭರ್ತಿ ಮಾಡಲೂ ಸಹ ಮನವಿಯಲ್ಲಿ ಕೋರಲಾಗಿದೆ.

ಪ್ರಕರಣವೇನು?: ತಾಲೂಕು ವ್ಯಾಪ್ತಿಯ ಯಲಹಂಕ ಮತ್ತು ಹೆಸರಘಟ್ಟ ಹೋಬಳಿಯ 4 ಪಶು ವೈದ್ಯಕೀಯ ಆಸ್ಪತ್ರೆಗಳನ್ನು ಸರಕಾರ ರದ್ದುಪಡಿಸಿ ಬೇರೆ ಜಿಲ್ಲೆಗೆ ಸ್ಥಳಾಂತರ ಮಾಡಿತ್ತು. ಪಶು ಆಸ್ಪತ್ರೆಗಳು, ಪಶು ಚಿಕಿತ್ಸಾಲಯಗಳು, ಪ್ರಾಥಮಿಕ ಪಶು ಚಿಕಿತ್ಸಾಲಯ ಮತ್ತು ಸಂಚಾರಿ ಚಿಕಿತ್ಸಾಲಯಗಳನ್ನು ಪಶುಪಾಲನಾ ಸಚಿವರ ಕ್ಷೇತ್ರಕ್ಕೆ ಸ್ಥಳಾಂತರಿಸಿರುವ ಆದೇಶವನ್ನು ಸರಕಾರ ಬಿಡುಗಡೆ ಮಾಡಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News