×
Ad

‘ಋತು ಚಕ್ರ ರಜೆ ನೀತಿ-2025’ ಜಾರಿಗೆ ತರಲು ಸಂಪುಟ ನಿರ್ಣಯ : ಎಚ್.ಕೆ.ಪಾಟೀಲ್

Update: 2025-10-09 18:43 IST

ಎಚ್.ಕೆ.ಪಾಟೀಲ್

ಬೆಂಗಳೂರು, ಅ. 9: ರಾಜ್ಯದಾದ್ಯಂತ ಸರಕಾರಿ ಕಚೇರಿಗಳು, ಗಾರ್ಮೆಂಟ್ಸ್, ಬಹುರಾಷ್ಟ್ರೀಯ ಕಂಪೆನಿ (ಎಂಎನ್‍ಸಿ)ಗಳು, ಐಟಿ ಕಂಪೆನಿಗಳು ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ ‘ಋತು ಚಕ್ರ ರಜೆ ನೀತಿ, 2025’ ಅನ್ನು ಜಾರಿಗೆ ತರಲು ಸಚಿವ ಸಂಪುಟ ನಿರ್ಣಯಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವರ್ಷದಲ್ಲಿ 12 ದಿನ ವೇತನ ಸಹಿತ ರಜೆ ನೀಡಲಾಗುತ್ತದೆ. ತಿಂಗಳಲ್ಲಿ ಋತುಚಕ್ರವಾದಾಗ ಯಾವ ದಿನ ಬೇಕಾದರೂ ಒಂದು ದಿನ ಹೆಣ್ಣು ಮಕ್ಕಳು ರಜೆ ತೆಗೆದುಕೊಳ್ಳಬಹುದು ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News