×
Ad

ರಾಜ್ಯಪಾಲರು ಸಿಎಂಗೆ ಶೋಕಾಸ್ ನೋಟಿಸ್ ನೀಡಿರುವುದೇ ತಪ್ಪು : ಗೃಹ ಸಚಿವ ಜಿ.ಪರಮೇಶ್ವರ್

Update: 2024-08-07 18:31 IST

ಬೆಂಗಳೂರು : ರಾಜ್ಯಪಾಲರು ಮುಖ್ಯಮಂತ್ರಿಗೆ ಶೋಕಾಸ್ ನೋಟಿಸ್ ನೀಡಿರುವುದೇ ತಪ್ಪು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬುಧವಾರ ಕೊಪ್ಪಳ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಮುಖ್ಯಮಂತ್ರಿಗೆ ಶೋಕಾಸ್ ನೋಟಿಸ್ ಕೊಟ್ಟಿದ್ದು, ಪ್ರಾಸಿಕ್ಯೂಷನ್‍ಗೆ ಯಾಕೆ ಅನುಮತಿ ಕೊಡಬಾರದು ಎಂದು ಕೇಳಿದ್ದಾರೆ. ಶೋಕಸ್ ನೋಟಿಸ್ ನೀಡಿರುವುದೇ ತಪ್ಪು. ಅದನ್ನು ವಾಪಸ್ ಪಡೆಯಬೇಕು ಎಂದರು.

ಇನ್ನೂ, ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಬೇಡಿ ಎಂದು ಸಚಿವ ಸಂಪುಟದ ಸಲಹೆಯನ್ನು ತಿಳಿಸಿದೆ. ರಾಜ್ಯಪಾಲರು ನಮ್ಮ ಸಲಹೆಯನ್ನು ತೆಗೆದುಕೊಳ್ಳಬಹುದು ಅಥವಾ ಇಲ್ಲದೇ ಇರಬಹುದು. ಪ್ರಾಸಿಕ್ಯೂಷನ್‍ಗೆ ಅವಕಾಶ ನೀಡಿದರೆ ಎದುರಿಸುತ್ತೇವೆ. ಕಾನೂನು ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News