×
Ad

ಕಾನೂನಿನಲ್ಲಿ ಅವಕಾಶವಿದ್ದರೆ ಕುಮಾರಸ್ವಾಮಿಯವರನ್ನು ಬಂಧಿಸುತ್ತೇವೆ : ಗೃಹ ಸಚಿವ ಜಿ.ಪರಮೇಶ್ವರ್

Update: 2024-08-22 20:36 IST

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಂಧನ ಸಂಬಂಧ ಕಾನೂನಿನಲ್ಲಿ ಅವಕಾಶ ಇದ್ದರೆ ಮಾಡುತ್ತಾರೆ. ಇದಕ್ಕೆ ನೂರು ಜನರ ಅವಶ್ಯಕತೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲದಕ್ಕೂ ಕಾನೂನಿದೆ. ಕಾನೂನಿನ ಅಡಿಯಲ್ಲಿ ತನಿಖೆ ನಡೆಯಲಿದೆ. ಅಲ್ಲದೆ, ಕುಮಾರಸ್ವಾಮಿ ಅವರು ಕಾನೂನು ಹೋರಾಟ ಮಾಡಲು ಯಾವುದೇ ತಡೆ ಇಲ್ಲ ಎಂದು ನುಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಸಹಿ ಇರುವ ದಾಖಲೆ ಪತ್ರವನ್ನು ಸಚಿವ ಭೈರತಿ ಸುರೇಶ್ ಅವರು ಹೆಲಿಕಾಪ್ಟರ್‌ ನಲ್ಲೇ ತಿದ್ದಿದ್ದಾರೆ, ವೈಟ್ನರ್ ಹಾಕಿದ್ದಾರೆ ಎಂದೆಲ್ಲಾ ಹೇಳುತ್ತಾರೆ. ಆದರೆ, ನಾನು ಅದನ್ನು ನೋಡಿಲ್ಲ, ಒಂದು ವೇಳೆ ಆ ರೀತಿ ಆಗಿದ್ದರೆ ಈಗಾಗಲೇ ಎಸ್‌ಐಟಿ ತನಿಖೆ ಮಾಡುತ್ತಿದೆ. ಅದನ್ನು ಅವರು ನೋಡ್ತಾರೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News