×
Ad

ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಉದ್ಭವಿಸದು : ಗೃಹ ಸಚಿವ ಜಿ.ಪರಮೇಶ್ವರ್

Update: 2024-08-31 18:46 IST

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರ ಅಥವಾ ಬೇರೆಯವರನ್ನು ಸಿಎಂ ಮಾಡುವ ಪ್ರಶ್ನೆಯೇ ಈ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಉದ್ಭವಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಶನಿವಾರ ಇಲ್ಲಿನ ಸದಾಶಿವನಗರದಲ್ಲಿನ ತನ್ನ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಮುಖ್ಯಮಂತ್ರಿ ರಾಜೀನಾಮೆ ಕೊಡುವುದಿಲ್ಲ ಎಂದು ನಾವೆಲ್ಲರೂ ಹೇಳುತ್ತಿದ್ದೇವೆ. ಹೀಗಾಗಿರುವಾಗ ರಾಜೀನಾಮೆ ಪ್ರಶ್ನೆ ಎಲ್ಲಿ ಬರುತ್ತದೆ ಎಂದು ವಿವರಣೆ ನೀಡಿದರು.

ಕೋವಿಡ್ ಹಗರಣಗಳ ಸಂಬಂಧ ನ್ಯಾ.ಮೈಕೆಲ್ ಡಿ. ಕುನ್ಹಾ ನೇತೃತ್ವದ ಆಯೋಗವು ಇನ್ನೂ ಕಾಲಾವಕಾಶ ಕೇಳಿದ್ದು, ಇನ್ನೂ ಆರು ತಿಂಗಳು ಕಾಲಾವಕಾಶ ನೀಡಿದ್ದೇವೆ. ಇದೀಗ ಆಯೋಗವು ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಿದರು.

ನಟ ದರ್ಶನ್‍ಗೆ ವಿಡಿಯೋ ಕಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನೂ ವರದಿ ಬಂದಿಲ್ಲ. ಹಿರಿಯ ಅಧಿಕಾರಿ ಚಂದ್ರಗುಪ್ತ ತನಿಖೆ ಕೈಗೊಂಡಿದ್ದು, ವರದಿ ಬಳಿಕ ಎಲ್ಲವೂ ಗೊತ್ತಾಗಲಿದೆ. ಸಿಎಂ ಆಪ್ತ ಮರುಗೌಡ ಆರು ಕೋಟಿ ರೂ.ಮೌಲ್ಯದ ಮನೆ ಖರೀದಿಗೆ ಸಂಬಂಧಿಸಿದಂತೆ ನನಗೆ ಮಾಹಿತಿ ಇಲ್ಲ ಎಂದು ಪರಮೇಶ್ವರ್ ಸ್ಪಷ್ಟಣೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News