×
Ad

Budget Session 2026 | ಬೆಂಗಳೂರು ಪೊಲೀಸ್ ವ್ಯವಸ್ಥೆಯ ಪುನರ್ ರಚನೆಗೆ ಚಿಂತನೆ : ಗೃಹ ಸಚಿವ ಜಿ.ಪರಮೇಶ್ವರ್

Update: 2026-03-10 21:04 IST

ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆಯ ಹೆಚ್ಚಳ, ಸಂಚಾರ ದಟ್ಟಣೆ ಹಾಗೂ ಕಾನೂನು ಸುವ್ಯವಸ್ಥೆಯ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತಾಲಯವನ್ನು ಪುನರ್ ರಚಿಸುವ ಕುರಿತು ಸರಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳವಾರ ವಿಧಾನ ಪರಿಷತ್ತಿನ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಡಾ. ಕೆ. ಗೋವಿಂದರಾಜ್ ಅವರು ನಿಯಮ-330ರಡಿ ಮಂಡಿಸಿದ್ದ ಸೂಚನೆಗೆ ಉತ್ತರಿಸಿದ ಸಚಿವರು, ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ನಿರ್ವಹಣೆಯನ್ನು ಒಬ್ಬ ಅಪರ ಪೊಲೀಸ್ ಆಯುಕ್ತರು, ಇಬ್ಬರು ಜಂಟಿ ಪೊಲೀಸ್ ಆಯುಕ್ತರು (ಕಾನೂನು ಸುವ್ಯವಸ್ಥೆ ಮತ್ತು ಸಂಚಾರ) ಹಾಗೂ 11 ಡಿಸಿಪಿಗಳು (ಕಾನೂನು ಸುವ್ಯವಸ್ಥೆ), 4 ಡಿಸಿಪಿಗಳು (ಸಂಚಾರ) ಮತ್ತು 2 ಡಿಸಿಪಿಗಳು (ಅಪರಾಧ) ಅವರ ಮೇಲ್ವಿಚಾರಣೆಯಲ್ಲಿ ನಿರ್ವಹಿಸಲಾಗುತ್ತಿದೆ ಎಂದರು.

ನಗರದ ಬೆಳೆಯುತ್ತಿರುವ ಅಗತ್ಯಗಳಿಗೆ ಅನುಗುಣವಾಗಿ, ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವುದು ಅತ್ಯಗತ್ಯ ಎಂಬ ಅಂಶವನ್ನು ಸರಕಾರ ಮನಗಂಡಿದೆ. ಈ ಸಂಬಂಧವಾಗಿ 2025ರ ಡಿ.24ರಂದು ಸಭೆ ನಡೆದು ಚರ್ಚಿಸಲಾಗಿದೆ. ಪೊಲೀಸ್ ಆಯುಕ್ತಾಲಯದ ಪುನರ್ರಚನೆಯ ಪ್ರಸ್ತಾವನೆಯು ಸದ್ಯ ಸರಕಾರದ ಪರಿಶೀಲನೆಯಲ್ಲಿದೆ. ನಗರದ ಭದ್ರತೆ ಮತ್ತು ಸುಗಮ ಸಂಚಾರಕ್ಕಾಗಿ ಸರಕಾರವು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲು ಬದ್ಧವಾಗಿದೆ ಎಂದು ಅವರು ತಿಳಿಸಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News