×
Ad

ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ ಗೃಹ ಸಚಿವ ಪರಮೇಶ್ವರ್

Update: 2023-09-02 19:34 IST

ಬೆಂಗಳೂರು, ಸೆ.2: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಆಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಶನಿವಾರ ಇಲ್ಲಿನ ಜಯನಗರದ ಖಾಸಗಿ ಆಸ್ಪತ್ರೆಗೆ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಅದೃಷ್ಟ ಚೆನ್ನಾಗಿತ್ತು.ಏಕೆಂದರೆ, 4 ದಿನಗಳ ಹಿಂದೆ ಅವರಿಗೆ ಮೈಲ್ಡ್ ಸ್ಟ್ರೋಕ್ ಅಗಿತ್ತು ಎಂದು ಮಾಹಿತಿ ನೀಡಿದರು. 

ʼʼಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸದೆ ಹೋಗಿದ್ದರೆ ಹೆಚ್ಚಿನ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಅವರನ್ನು ಸರಿಯಾದ ಸಮಯದಲ್ಲಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿರುವುದರಿಂದ ಅಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ಸಿಕ್ಕಿದೆ ʼʼ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News