×
Ad

ಹುಬ್ಬಳ್ಳಿ | ನಿಂತಿದ್ದ ವಾಣಿಜ್ಯ ತೆರಿಗೆ ಇಲಾಖೆ ವಾಹನಕ್ಕೆ ಲಾರಿ ಡಿಕ್ಕಿ: ಕರ್ತವ್ಯನಿರತ ಸಿಬ್ಬಂದಿ ಮೃತ್ಯು

Update: 2023-08-20 20:11 IST

ಹುಬ್ಬಳ್ಳಿ , ಆ.20: ನಿಂತಿದ್ದ ವಾಣಿಜ್ಯ ತೆರಿಗೆ ಇಲಾಖೆ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿ ಚಾಲಕನೋರ್ವ ಮೃತಪಟ್ಟ ಘಟನೆ ಹುಬ್ಬಳ್ಳಿಯ ರಿಂಗ್ ರೋಡ್ ನಲ್ಲಿ ನಡೆದಿದೆ.

ಕರ್ತವ್ಯ ನಿರತ ವಾಹನ ಚಾಲಕ ರಫೀಕ್ ನದಾಫ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ರಸ್ತೆಬದಿಯಲ್ಲಿ ವಾಹನ ನಿಲ್ಲಿಸಿ ತೆರಿಗೆ ಅಧಿಕಾರಿಗಳಗಳಿಂದ ಸರಕು ಸಾಗಣೆ ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಇಬ್ಬರು ಅಧಿಕಾರಿಗಳು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News