×
Ad

ಹುಬ್ಬಳ್ಳಿ-ಧಾರವಾಡಕ್ಕೆ ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ 1500 ಕೋಟಿ ರೂ. ಬಂದಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Update: 2024-01-20 18:27 IST

ಹುಬ್ಬಳ್ಳಿ,: ‘ಸ್ಮಾರ್ಟ್‍ಸಿಟಿ ಯೋಜನೆಯಡಿ ಹುಬ್ಬಳ್ಳಿ-ಧಾರವಾಡಕ್ಕೆ ಸುಮಾರು 1,500ಕೋಟಿ ರೂ. ಅನುದಾನವನ್ನು ಕೇಂದ್ರ ಸರಕಾರ ಒದಗಿಸಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಸ್ಮಾರ್ಟ್‍ಸಿಟಿ ಯೋಜನೆ ಮೂಲಕ ಕೇಂದ್ರ ಸರಕಾರ ಹುಬ್ಬಳ್ಳಿ-ಧಾರವಾಡ ಜಿಲ್ಲೆಗೆ ಸಾವಿರಾರು ಕೋಟಿ ರೂ.ನೀಡಿದೆ. ಆದರೆ, ಯೋಜನೆ ಕಾರ್ಯಗತಗೊಳಿಸುವುದು ರಾಜ್ಯ ಸರಕಾರದ ಹೊಣೆ ಎಂದು ಸ್ಪಷ್ಟಪಡಿಸಿದರು.

ತೋಳನಕೆರೆ ಉದ್ಯಾನ ಅಭಿವೃದ್ಧಿ, ಸುಸಜ್ಜಿತ ಕ್ರೀಡಾ ಸಂಕೀರ್ಣ ಹೀಗೆ ಕೆಲ ಪ್ರಮುಖ ಯೋಜನೆಗಳನ್ನು ಕೈಗೊಳ್ಳಲಾಗಿದೆ. ಇದರಿಂದಾಗಿ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ಸಚಿವ ಜೋಶಿ ವಿವರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News