×
Ad

ಹುಬ್ಬಳ್ಳಿ: ಜಾತ್ರೆಗೆ ಬಂದಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

Update: 2024-09-02 12:54 IST

ಹುಬ್ಬಳ್ಳಿ: ಊರಿನ ಜಾತ್ರೋತ್ಸವಕ್ಕೆ ಆಗಮಿಸಿದ್ದ ವ್ಯಕ್ತಿಯೋರ್ವನ ಮೃತದೇಹ ಇಂದು ಬೆಳಗ್ಗೆ ಬಾವಿಯಲ್ಲಿ ಪತ್ತೆಯಾದ ಘಟನೆ ಹುಬ್ಬಳ್ಳಿಯ ಗ್ಲಾಸ್ ಹೌಸ್ ಬಳಿ ನಡೆದಿದೆ.

ಅನುಮಾನಾಸ್ಪದವಾಗಿ ಮೃತಪಟ್ಟವರನ್ನು ಗಿರಣಿಚಾಳ ನಿವಾಸಿ ಹುಲ್ಲೇಶ್ ಹನುಮಂತಪ್ಪ ಹಾಲರವಿ (38) ಎಂದು ಗುರುತಿಸಲಾಗಿದೆ.

ಕಳೆದ ಹತ್ತು ವರ್ಷಗಳಿಂದ ತಾರಿಹಾಳದಲ್ಲಿ ವಾಸ್ತವ್ಯವಿದ್ದ ಹುಲ್ಲೇಶ್ ಗಿರಣಿಚಾಳದಲ್ಲಿ ನಡೆಯುವ ಜಾತ್ರೆ ಪ್ರಯುಕ್ತ ಊರಿಗೆ ಆಗಮಿಸಿದ್ದರು. ರವಿವಾರ ರಾತ್ರಿ 9 ಗಂಟೆ ಸುಮಾರಿಗೆ ಮನೆಯಿಂದ ಹೊರಟಿದ್ದ ಹುಲ್ಲೇಶ್ ಬಳಿಕ ನಾಪತ್ತೆಯಾಗಿದ್ದರು. ಇಂದು ಬೆಳಗ್ಗೆ ಅವರ ಮೃತದೇಹ ಹುಬ್ಬಳ್ಳಿಯ ಇಂದಿರಾ ಗ್ಲಾಸ್ ಹೌಸ್ ಬಳಿಯಲ್ಲಿರುವ ಬಾವಿಯಲ್ಲಿ ಪತ್ತೆಯಾಗಿದೆ. ಹಲ್ಲೇಶ್ ಅವರ ಕುತ್ತಿಗೆಯಲ್ಲಿ ಗಾಯದ ಕಲೆಗಳು ಕಂಡುಬಂದಿವೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಸ್ಥಳಕ್ಕೆ ಉಪನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News