×
Ad

ಚಿಕ್ಕಮಗಳೂರು: ಭಾರೀ ಗಾಳಿ-ಮಳೆಗೆ ಧರೆಗುರುಳಿದ ಬೃಹತ್ ಮರ

Update: 2023-07-04 15:06 IST

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆ ಹಿನ್ನೆಲೆ ಬೃಹತ್ ಗಾತ್ರದ ಬೀಟೆ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆದ ಘಟನೆ ಕಳಸ ತಾಲೂಕಿನ ಚನ್ನಹಡ್ಲು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಮರ ತೆರವುಗೊಳಿಸಿದ ಗ್ರಾಮಸ್ಥರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಮಲೆನಾಡಲ್ಲಿ ಸಾಧಾರಣ ಮಳೆ ಜೊತೆ, ಭಾರೀ ಗಾಳಿ ಬೀಸುತ್ತಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News