×
Ad

ಹನೂರು | ಆನೆ ದಂತ ಸಾಗಾಟ ಮಾಡುತ್ತಿದ್ದ ಮೂವರ ಬಂಧನ

Update: 2024-08-18 10:34 IST

ಚಾಮರಾಜನಗರ, ಆ.18: ಕಾರಿನಲ್ಲಿ ಆನೆ ದಂತಗಳನ್ನು ಸಾಗಿಸುತ್ತಿದ್ದ ಆರೋಪದಲ್ಲಿ ಮೂವರನ್ನು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ ತಾಲೂಕಿನ ಅಂಕನಶೆಟ್ಟಿಪುರದ ಶಿವಮೂರ್ತಿ(57), ತಮಿಳುನಾಡಿನ ತಿರುಪೂರು ಜಿಲ್ಲೆಯ ರವನಪುರಂ ಗ್ರಾಮದ ಶಿವಕುಮಾರ್ (44) ಹಾಗೂ ಅಂಡಿಪಾಳ್ಯಂ ಚಿನ್ನಕವುಂಡನ್ ಅಂತೋಣಿ (46) ಬಂಧಿತ ಆರೋಪಿಗಳು.

ಬಂಧಿತರಿಂದ ಆನೆಯ 2 ದಂತ ಹಾಗೂ ಒಂದು ಕಾರು ಜಪ್ತಿ ಮಾಡಲಾಗಿದೆ.

ಖಚಿತ ಮಾಹಿತಿ ಮೇರೆಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಸಬ್ ಇನ್ ಸ್ಪೆಕ್ಟರ್ ವಿಜಯರಾಜ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ದಂತಗಳ ಸಮೇತ ಬಂಧಿಸಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ನ್ಯಾಯಾಂಗ ಮುಂದೆ ಹಾಜರುಪಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News