×
Ad

ನಾನು ಯಾವುದೇ ಹುದ್ದೆಗೂ ಅಂಟಿಕೊಂಡು ಕುಳಿತಿಲ್ಲ: ಡಿ.ಕೆ. ಶಿವಕುಮಾರ್

Update: 2025-01-17 21:35 IST

ಡಿ.ಕೆ. ಶಿವಕುಮಾರ್ (Photo: X/@DKShivakumar)

ಬೆಂಗಳೂರು: ನಾನು ಯಾವುದೇ ಹುದ್ದೆಗೂ ಅಂಟಿಕೊಂಡು ಕುಳಿತಿಲ್ಲ. ನಮ್ಮ ಪಕ್ಷದಲ್ಲಿ ಅವರವರ ನಾಯಕತ್ವ ಮತ್ತು ಸಂಘಟನಾ ಸಾಮಥ್ರ್ಯದ ಆಧಾರದ ಮೇಲೆ ಸ್ಥಾನಗಳನ್ನು ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ಹುದ್ದೆಗೆ ಅಂಟಿಕೊಂಡು ಕುಳಿತಿಲ್ಲ. ನಮಗೆ ಬೇಕಾದ ಹುದ್ದೆಗಳ ಬಗ್ಗೆ ಮಾಧ್ಯಮಗಳಲ್ಲಿ ಚರ್ಚಿಸಿದರೆ ಸಿಗುವುದಿಲ್ಲ ಎಂದು ಹೇಳಿದರು.

ಪಕ್ಷದ ನಾಯಕರ ಸಮಸ್ಯೆಗಳನ್ನು ಹೈಕಮಾಂಡ್ ಪರಿಹರಿಸುತ್ತದೆ ಮತ್ತು ಕರ್ನಾಟಕದವರಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದ ಪರಿಸ್ಥಿತಿಯ ಬಗ್ಗೆ ಚೆನ್ನಾಗಿ ತಿಳಿದಿದೆ. ಎಲ್ಲವನ್ನೂ ಅವರೇ ನೋಡಿಕೊಳ್ಳುತ್ತಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News