×
Ad

ಧಾರವಾಡ ಲೋಕಸಭಾ ಕ್ಷೇತ್ರದಿಂದ ನಾನೇ ಅಭ್ಯರ್ಥಿ:‌ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Update: 2024-01-27 20:45 IST

ಪ್ರಹ್ಲಾದ್‌ ಜೋಶಿ (PTI)

ಬೆಂಗಳೂರು: ‘ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಾನು ಈಗಾಗಲೇ ಚುನಾವಣಾ ತಯಾರಿ ಆರಂಭ ಮಾಡಿದ್ದೇನೆ’ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ.

ಶನಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಧಾರವಾಡ ಲೋಕಸಭೆ ಕ್ಷೇತ್ರಕ್ಕೆ ನನಗೆ ಗೊತ್ತಿರುವ ಮಟ್ಟಿಗೆ ನಾನೇ ಅಭ್ಯರ್ಥಿ ಎಂಬುದು ಸ್ಪಷ್ಟವಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಯಾವುದೇ ಗೊಂದಲವಿಲ್ಲ. ಆದರೆ, ಪಕ್ಷ ಅಭ್ಯರ್ಥಿಗಳ ಘೋಷಣೆ ಮಾಡುವ ಮುನ್ನ ನಾವು ಹಾಗೆಲ್ಲ ಹೇಳಬಾರದು. ಆದರೆ, ನನಗೆ ಯಾವುದೇ ಸಂಶಯವಿಲ್ಲ’ ಎಂದು ವಿವರಣೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News