×
Ad

ಮೈತ್ರಿ ಬಗ್ಗೆ ಮೋದಿ-ಶಾ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ; ದೆಹಲಿ ನಾಯಕರ ಸಭೆಯಲ್ಲಿ ಚರ್ಚೆಯೇ ಆಗಿಲ್ಲ: ಬಿಎಸ್‌ ವೈ ಯೂಟರ್ನ್‌

Update: 2023-09-14 14:22 IST

ಬೆಂಗಳೂರು: ʼಜೆಡಿಎಸ್​ ಜೊತೆ ಮೈತ್ರಿಗೆ ಹೈಕಮಾಂಡ್ ಒಲವು ತೋರಿಸಿದ್ದು, ಮೈತ್ರಿ ಮಾಡಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆʼ ಎಂದು ಹೇಳಿಕೆ ನೀಡಿದ್ದ ‌ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಗುರುವಾರ ಯೂಟರ್ನ್‌ ಹೊಡೆದಿದ್ದಾರೆ. 

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತರಳಿದ್ದ ಬಿಎಸ್‌ ವೈ, ಇಂದು ಬೆಂಗಳೂರಿಗೆ ಆಗಮಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಸುದ್ದಿಗಾರರ ಜತೆಗೆ ಮಾತನಾಡಿದರು. 

ʼʼದೆಹಲಿ ಸಭೆಯಲ್ಲಿ ರಾಜ್ಯದ ಯಾವ ವಿಚಾರವೂ ಚರ್ಚೆಯಾಗಿಲ್ಲ. ಮೈತ್ರಿ ಬಗ್ಗೆಯೂ ಚರ್ಚೆ ಆಗಿಲ್ಲ. ಸಭೆಯಲ್ಲಿ ಕೇವಲ ಜಿ20 ಶೃಂಗಸಭೆ, ಚಂದ್ರಯಾನ ಯಶಸ್ಸಿನ ಬಗ್ಗೆ ಚರ್ಚೆ ಆಗಿದೆʼʼ ಎಂದು ಸ್ಪಷ್ಟಪಡಿಸಿದರು.

ʼʼಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ತೀರ್ಮಾನ ಮಾಡುತ್ತಾರೆ. ಅವರ ಮನಸ್ಸಿನಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಚರ್ಚೆ ಬಳಿಕ ವಾಸ್ತವಿಕ ಸಂಗತಿ ಗೊತ್ತಾಗಲಿದೆʼʼ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News