ಮಾಜಿ ಸಿಎಂ ಸಿದ್ದರಾಮಯ್ಯ 

ಮೈಸೂರು: ನನಗೆ ಈಗ 80 ವರ್ಷ ವಯಸ್ಸಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರೇ ಚುನಾವಣೆಗೆ ನಿಲ್ಲುವಂತೆ ಹೇಳಿದರೂ ನನಗೆ ಸ್ಪರ್ಧಿಸಲು ಸಾಧ್ಯವಿಲ್ಲ. ಏಕೆಂದರೆ ನನಗೆ ಈಗ 80 ವರ್ಷ ವಯಸ್ಸಾಗಿದೆ ಎಂದು ಹೇಳಿದರು.

ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಐದನೇ ಸಾಲಿನಲ್ಲಿ ಕುಳಿತಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ನಾನೇ ಕಾರ್ಯಕ್ರಮಕ್ಕೆ ತಡವಾಗಿ ಹೋಗಿದ್ದೆ. ಹಾಗಾಗಿ ಹಿಂದೆ ಕುಳಿತೆ. ಈ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ ಎಂದರು.





Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ನೇರಳೆ ಸತೀಶ್ ಕುಮಾರ್/ವಾರ್ತಾಭಾರತಿ

contributor

ನೇರಳೆ ಸತೀಶ್ ಕುಮಾರ್ ಅವರು ಕಳೆದ 20 ವರ್ಷಗಳಿಂದ ಪತ್ರಿಕೋದ್ಯಮ‌ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ನಂಜನಗೂಡಿನಿಂದ ಪತ್ರಿಕೋದ್ಯಮ ಆರಂಭಿಸಿದ ಅವರು, ಮೈಸೂರು, ಬೆಂಗಳೂರು ನಗರಗಳಲ್ಲಿ ಹಲವಾರು ಜಿಲ್ಲಾ ಮತ್ತು ರಾಜ್ಯಮಟ್ಟದ ಪತ್ರಿಕೆಗಳಲ್ಲಿ ವರದಿಗಾರ ಮತ್ತು ಉಪ ಸಂಪಾದಕನಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಕಳೆದ 9 ವರ್ಷಗಳಿಂದ ವಾರ್ತಾಭಾರತಿ ಪತ್ರಿಕೆಯಲ್ಲಿ ಮೈಸೂರು ಜಿಲ್ಲಾ ವರದಿಗಾರರಾಗಿಕರ್ತವ್ಯ ನಿರ್ವಹಿಸುತ್ತಿದ್ದಾರೆ.