×
Ad

ಮೂವರು ಡಿಸಿಎಂಗಳನ್ನು ಮಾಡುವಂತೆ ಹೈಕಮಾಂಡ್‌ಗೆ ಪತ್ರ ಬರೆಯುತ್ತೇನೆ: ಸಚಿವ ಕೆ.ಎನ್‌. ರಾಜಣ್ಣ

Update: 2023-09-16 19:52 IST

ತುಮಕೂರು : ʼʼಮೂವರು ಡಿಸಿಎಂಗಳನ್ನು ಮಾಡುವಂತೆ ಹೈಕಮಾಂಡ್‌ಗೆ ಪತ್ರ ಬರೆಯುತ್ತೇನೆʼʼ ಎಂದು ಸಹಕಾರಿ ಸಚಿವ ಕೆ.ಎನ್‌. ರಾಜಣ್ಣ ಹೇಳಿದ್ದಾರೆ. 

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂವರು ಡಿಸಿಎಂಗಳನ್ನು ಮಾಡಿದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅನುಕೂಲ ಆಗಲಿದೆ. ಎಲ್ಲ ಸಮುದಾಯಗಳನ್ನು ನಮಗೆ ಬೆಂಬಲ ನೀಡಲು ಸಹಾಯ ಆಗುತ್ತದೆ. ಈ ಬಗ್ಗೆ ಹೈಕಮಾಂಡ್‌ಗೆ ಪತ್ರ ಬರೆಯುತ್ತೇನೆ ಎಂದು  ಹೇಳಿದರು. 

ʼʼಮುಂದಿನ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲಬೇಕಿದೆ. ಇದಕ್ಕೆ ಎಲ್ಲಾ ಸಮುದಾಯಗಳ ಬೆಂಬಲ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ–ಪಂಗಡ, ಅಲ್ಪಸಂಖ್ಯಾತರು, ವೀರಶೈವ ಲಿಂಗಾಯತ ಸಮುದಾಯಕ್ಕೆ ತಲಾ ಒಂದು ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕೇಳಿಕೊಳ್ಳಲಾಗುವುದುʼʼ ಎಂದು ಅವರು ಹೇಳಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News