ಐಎಎಸ್, ಕೆಎಎಸ್ ಅಧಿಕಾರಿಗಳ ವರ್ಗಾವಣೆ-ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಆದೇಶ
ಬೆಂಗಳೂರು: ರಾಜ್ಯ ಸರಕಾರವು 6 ಮಂದಿ ಕೆಎಎಸ್, ಮೂವರು ಐಎಎಸ್ ಅಧಿಕಾರಿಗಳಿಗೆ ವರ್ಗಾವಣೆ ಹಾಗೂ 8 ಮಂದಿ ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಸೋಮವಾರ ಆದೇಶ ಹೊರಡಿಸಿದೆ.
ವರ್ಗಾವಣೆ: ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಾ.ರಾಕೇಶ್ ಕುಮಾರ್ ಕೆ. ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ದಕ್ಷಿಣ ಪಾಲಿಕೆಯ ಆಯುಕ್ತರನ್ನಾಗಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ದಕ್ಷಿಣ ಪಾಲಿಕೆಯ ಆಯುಕ್ತರಾಗಿದ್ದ ರಮೇಶ್ ಕೆ.ಎನ್. ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತ(ಆರೋಗ್ಯ ಮತ್ತು ಶಿಕ್ಷಣ)ರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತ(ಆರೋಗ್ಯ ಮತ್ತು ಶಿಕ್ಷಣ) ವೆಂಕಟಾಚಲಪತಿ ಆರ್. ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಕೇಂದ್ರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಅಭಿವೃದ್ಧಿ)ರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯುಕ್ತಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತ(ಎಫ್‍ಇಸಿಸಿ, ಚುನಾವಣೆ, ವಿಪತ್ತು ನಿರ್ವಹಣೆ, ಸಾರ್ವಜನಿಕ ಸಂಪರ್ಕ ಹಾಗೂ ಸಂಯೋಜನೆ)ರಾಗಿ ಶಿಲ್ಪಾ ನಾಗ್, ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಪುರುರಾಜ್ ಸಿಂಗ್ ಸೋಲಂಕಿ, ಕಲಬುರಗಿ ಜಿಲ್ಲೆಯ ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ರಿತಿಕಾ ವರ್ಮ ಅವರನ್ನು ಸ್ಥಳ ನಿಯುಕ್ತಿಗೊಳಿಸಲಾಗಿದೆ.
ವಿಜಯಪುರ ಜಿಲ್ಲೆಯ ವಿಜಯಪುರ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಝುಲ್ಫಿಶಾನ್ ಹಖ್, ಬೀದರ್ ಜಿಲ್ಲೆಯ ಬೀದರ್ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಅಭಿನವ್ ಜೈನ್, ಹಾವೇರಿ ಜಿಲ್ಲೆಯ ಸವಣೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಖೋಡೆ ಸಮೀರ್ ಪ್ರಕಾಶ್ ಅವರನ್ನು ಸ್ಥಳ ನಿಯುಕ್ತಿಗೊಳಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ರಮ್ಯಾ ಆರ್. ಹಾಗೂ ರಾಯಚೂರು ಜಿಲ್ಲೆಯ ಲಿಂಗಸುಗೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ನಾಗೇಂದ್ರ ಬಾಬು ಕುಮಾರ್ ಅವರನ್ನು ಸ್ಥಳ ನಿಯುಕ್ತಿಗೊಳಿಸಲಾಗಿದೆ.
ಕೆಎಎಸ್: ರಾಯಚೂರು ಜಿಲ್ಲೆಯ ಲಿಂಗಸುಗೂರು ಉಪ ವಿಭಾಗದ ಸಹಾಯಕ ಆಯುಕ್ತ ಬಸವಣ್ಣಪ್ಪ ಕಾಲಶೆಟ್ಟಿ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯಾಗಿ, ಚಿಕ್ಕಮಗಳೂರು ಉಪ ವಿಭಾಗದ ಸಹಾಯಕ ಆಯುಕ್ತ ಎಸ್.ರವಿ ಅವರನ್ನು ಕೊಟ್ಟೂರು-ಹರಿಹರ ರೈಲ್ವೆ ಬ್ರಾಡ್‍ಗೇಜ್ ನಿರ್ಮಾಣ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಕಾರವಾರ ಉಪ ವಿಭಾಗದ ಸಹಾಯಕ ಆಯುಕ್ತ ಶಾ ಆಲಮ್ ಹುಸೇನ್ ಅವರನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಧಾರವಾಡದ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ, ವಿಜಯಪುರ ಉಪ ವಿಭಾಗದ ಸಹಾಯಕ ಆಯುಕ್ತ ಗುರುನಾಥ ಶಿವಪುತ್ರಪ್ಪ ಧಡ್ಡೆ ಅವರನ್ನು ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಬೀದರ್ ಉಪ ವಿಭಾಗದ ಸಹಾಯಕ ಆಯುಕ್ತ ಮುಹಮ್ಮದ್ ಶಕೀಲ್ ಅವರನ್ನು ಕಲಬುರಗಿ ವಿಶ್ವವಿದ್ಯಾಲಯದ ಕುಲಸಚಿವ(ಆಡಳಿತ)ರಾಗಿ ಹಾಗೂ ಹಾವೇರಿ ಜಿಲ್ಲೆಯ ಸವಣೂರು ಉಪ ವಿಭಾಗದ ಸಹಾಯಕ ಆಯುಕ್ತ ವಿಜಯಕುಮಾರ್ ಎಚ್.ಬಿ. ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಾಯಕ ಆಯುಕ್ತ(ಚುನಾವಣೆ)ರನ್ನಾಗಿ ವರ್ಗಾವಣೆಗೊಳಿಸಲಾಗಿದೆ.