×
Ad

ಬಿಜೆಪಿ ಇದೇ ಪ್ರವೃತ್ತಿ ಮುಂದುವರಿಸಿದರೆ ರಾಜ್ಯದಲ್ಲಿ ಅವರ ಒಂದೇ ಒಂದು ಸಭೆ ಮಾಡಲು ಬಿಡಲ್ಲ: ಡಿ.ಕೆ. ಶಿವಕುಮಾರ್ ಎಚ್ಚರಿಕೆ

Update: 2025-04-28 16:22 IST

ಡಿ.ಕೆ.ಶಿವಕುಮಾರ್

ಬೆಳಗಾವಿ : ಸಿಎಂ ಸಿದ್ದರಾಮಯ್ಯರ ಭಾಷಣ ವೇಳೆ ಗದ್ದಲ ಎಬ್ಬಿಸಿದ ಬಿಜೆಪಿ ಕಾರ್ಯಕರ್ತೆಯರ ನಡೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಅವರು, “ನಮ್ಮ ಪ್ರತಿಭಟನಾ ಕಾರ್ಯಕ್ರಮಕ್ಕೆ ಬಿಜೆಪಿಯು ತಮ್ಮ ಕಾರ್ಯಕರ್ತರನ್ನು ಕಳುಹಿಸಿ ಕಪ್ಪು ಬಾವುಟ ಪ್ರದರ್ಶಿಸಿ ಗದ್ದಲ ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಬಿಜೆಪಿ ಹಾಗೂ ವಿರೋಧ ಪಕ್ಷದ ನಾಯಕರಿಗೆ ಹೇಳಲು ಬಯಸುತ್ತೇನೆ. ನಿಮ್ಮ ಪ್ರವೃತ್ತಿ ಹೀಗೆ ಮುಂದುವರೆದರೆ ರಾಜ್ಯದಲ್ಲಿ ನೀವು ಒಂದೇ ಒಂದು ಸಭೆ ಮಾಡಲು ನಾವು ಅವಕಾಶ ನೀಡುವುದಿಲ್ಲ. ಇದು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದರು.

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಬೆಲೆ ಏರಿಕೆ ವಿರೋಧಿಸಿ ಹಾಗೂ ಸಂವಿಧಾನ ರಕ್ಷಣೆಗೆ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು.

ಪೆಟ್ರೋಲ್, ಡೀಸೆಲ್, ಚಿನ್ನ, ಕಬ್ಬಿಣ, ಸೀಮೆಂಟ್ ಬೆಲೆ ಏರಿಕೆ ಏಕೆ ಆಗಿದೆ ಎಂದು ಬಿಜೆಪಿಯವರನ್ನು ಪ್ರಶ್ನಿಸಿ ಎಂದು ಕರೆ ನೀಡಬೇಕಾಗುತ್ತದೆ. ನೀವು ನಮ್ಮ ವಿರುದ್ಧ ಹೋರಾಟ ಮಾಡುವುದಕ್ಕಿಂತ, ನಾವು ನಿಮ್ಮ ವಿರುದ್ಧ ಹೋರಾಟ ಮಾಡಲು ನನಗೆ ಹೆಚ್ಚಿನ ಕಾರ್ಯಕ್ಷಮತೆ ಇದೆ. ಬಿಜೆಪಿ ನಾಯಕರೇ ನೀವು ನಿಮ್ಮ ಕಾರ್ಯಕರ್ತರಿಗೆ ಬುದ್ದಿ ಹೇಳಿ ಸರಿ ಮಾಡಿಕೊಂಡರೆ ಸರಿ, ಇಲ್ಲವಾದರೆ, ಎಲ್ಲಾ ರೀತಿಯ ಪ್ರತಿ ಹೋರಾಟಕ್ಕೆ ನಾವು ಸಿದ್ಧರಿದ್ದೇವೆ. ಇದು ಮನವಿಯಲ್ಲ ಎಚ್ಚರಿಕೆ” ಎಂದು ಕಿಡಿಕಾರಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News