×
Ad

ಬಿಜೆಪಿ ಹೇಳಿದರೆ ಕುಮಾರಸ್ವಾಮಿ ಚಡ್ಡಿನೂ ಹಾಕ್ತಾರೆ: ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

Update: 2023-11-21 22:10 IST

ಮಂಡ್ಯ: ಬಿಜೆಪಿ ಹೇಳಿದರೆ ಎಚ್.ಡಿ.ಕುಮಾರಸ್ವಾಮಿ ಚಡ್ಡಿನೂ ಹಾಕುತ್ತಾರೆ. ಆದ್ದರಿಂದ ದತ್ತಮಾಲೆ ಹಾಕಿಕೊಳ್ಳುವುದು ಸಂತೋಷ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ.

ಮಂಗಳವಾರ ಮಳವಳ್ಳಿ ತಾಲೂಕಿನಲ್ಲಿ ಬರ ಪರಿಸ್ಥಿತಿ ಅಧ್ಯಯನ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ತಾನು ಮುಸ್ಲಿಂ, ದಲಿತ, ಹಿಂದುಳಿದವರ ಪರ ಎಂದು ಹೆಸರೇಳಿಕೊಂಡು ಜಾತ್ಯತೀತ ಎಂದು ಹೆಸರಿಟ್ಟುಕೊಂಡರು. ಈಗ ದತ್ತಮಾಲೆ ಹಾಕುತ್ತೇನೆ ಎಂದು ಹೇಳುತ್ಎಂತಿದ್ದದಾರೆ.

ಕುಮಾರಸ್ವಾಮಿ ಅವರಿಗೆ ರಾಜ್ಯ ಮತ್ತು ಜನರ ಸಮಸ್ಯೆ ಮುಖ್ಯವಲ್ಲ. ಜನರ ಸಮಸ್ಯೆ ಬಗ್ಗೆ ಮಾತನಾಡುತ್ತಿಲ್ಲ. ಎರಡು ಮೂರು ತಿಂಗಳಿಂದ ನಾಲಗೆ ಮೇಲೆ ಹಿಡಿತ ಇಲ್ಲದೆ ಮಾತಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News