×
Ad

ಹಿರಿಯ ನಾಯಕರು ದೂರವಾದರೆ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ: ಸದಾನಂದಗೌಡ

Update: 2023-11-10 10:45 IST
Photo Credit - PTI 

ಮಂಡ್ಯ: 'ಹಿರಿಯ ನಾಯಕರು ಚುನಾವಣಾ ರಾಜಕಾರಣದಿಂದ ದೂರವಾದರೆ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಪಕ್ಷದ ರಾಷ್ಟ್ರೀಯ ಮುಖಂಡರು ಅಲೋಚನೆ ಮಾಡಬೇಕು' ಎಂದು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಸಂಸದ ಡಿ.ವಿ.ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ. 

ಮದ್ದೂರು ತಾಲೂಕಿನಲ್ಲಿ ಬಿಜೆಪಿ ವತಿಯಿಂದ ಕೈಗೊಂಡಿರುವ ಬರ ಪರಿಸ್ಥಿತಿ ಅಧ್ಯಯನ ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಹಿರಿಯ ನಾಯಕರಿಗೆ ಹೆಚ್ಚಿನ ಅನುಭವ ಇರುತ್ತದೆ. ಅವರಿಗೆ ಅವರದ್ದೇ ಆದ ಹಿಂಬಾಲಕರ ಪಡೆ ಇರುತ್ತದೆ. ಅವರನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದರ ಬಗ್ಗೆ ವರಿಷ್ಠರು ಚಿಂತನೆ ನಡೆಸಬೇಕು. ನನ್ನನ್ನು ಉಪಯೋಗಿಸಿಕೊಂಡರೆ ಪಕ್ಷಕ್ಕಾಗಿ ದುಡಿಯುತ್ತೇನೆ ಇಲ್ಲವಾದಲ್ಲಿ ಸುಖ ಜೀವನದಲ್ಲಿ ಇರುತ್ತೇನೆ'' ಎಂದು ಹೇಳಿದ್ದಾರೆ. 

'ರಾಜಕಾರಣಕ್ಕೆ ಪ್ರವೇಶಿಸಿದ 25 ವರ್ಷಕ್ಕೆ ಚುನಾವಣಾ ರಾಜಕೀಯದಿಂದ ದೂರ ಆಗಬೇಕೆಂದು ತೀರ್ಮಾನಿಸಿದ್ದೆ. ಆದರೆ, ಪಕ್ಷದ ಒತ್ತಡದ ಹಿನ್ನೆಲೆಯಲ್ಲಿ ಕಳೆದ ಬಾರಿ ಲೋಕಸಭೆಗೆ ಚುನಾವಣೆಗೆ ಸ್ಪರ್ಧೆ ಮಾಡಿದ್ದೆ' ಎಂದು ಅವರು ಸ್ಪಷ್ಟಪಡಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News