×
Ad

ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿಗೆ ಐಐಎಸ್‌ಸಿ ತಜ್ಞರ ಸಲಹೆ ಪಡೆಯಲಾಗಿದೆ: ಎಚ್.ಕಾಂತರಾಜು ಸ್ಪಷ್ಟನೆ

Update: 2023-11-25 23:12 IST

Photo:deccanherald.com

ಬೆಂಗಳೂರು: ಕಾನೂನಿನ ಚೌಕಟ್ಟಿನಲ್ಲೇ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿ ಸಿದ್ದಪಡಿಸಲಾಗಿದ್ದರೂ, ಕೆಲವರು ಅವೈಜ್ಞಾನಿಕವಾಗಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ವರದಿಯನ್ನು ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್(ಐಐಎಸ್‌ಸಿ) ಸಂಸ್ಥೆಯ ತಜ್ಞರ ಸಲಹೆ ಪಡೆದೇ  ತಯಾರಿಸಲಾಗಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜ ಸ್ಪಷ್ಟಪಡಿಸಿದ್ದಾರೆ.

ಶನಿವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ತಯಾರಿಸಿರುವ ವರದಿಯನ್ನು ಅವೈಜ್ಞಾನಿಕ ಎನ್ನುವುದು ಈ ಹಂತದಲ್ಲಿ ಸರಿಯಲ್ಲ. ನಾವು ತಯಾರಿಸಿರುವ ವರದಿ ಅತ್ಯಂತ ವೈಜ್ಞಾನಿಕವಾಗಿವೆ. ಆಯೋಗದ ವರದಿಯನ್ನು ಸರಕಾರ ಬಿಡುಗಡೆ ಮಾಡಿದ ನಂತರ ಪರಿಶೀಲಿಸಿ, ಅಧ್ಯಯನ ಮಾಡಿ, ಅಭಿಪ್ರಾಯಯಗಳನ್ನು ನೀಡುವುದು ಸೂಕ್ತ ಎಂದು ತಿಳಿಸಿದರು.

ಸಮೀಕ್ಷಾ ವರದಿ ತಯಾರಾದಾಗಿನಿಂದ ರಾಜ್ಯ ಸರಕಾರ ಅದನ್ನು ಸ್ವೀಕರಿಸಬೇಕೆಂದು ಆಯೋಗ ಮನವಿ ಮಾಡುತ್ತಾ ಬಂದಿದೆ. ಹಿಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೂ ವರದಿ ಸ್ವೀಕರಿಸುವಂತೆ ಮನವಿ ಮಾಡಲಾಗಿತ್ತು. ಆ ನಂತರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಈ ಬಗ್ಗೆ ಚರ್ಚಿಸಲು ಅವಕಾಶ ಕೋರಲಾಗಿತ್ತು. ಆದರೆ ಅವಕಾಶ ದೊರೆಯಲಿಲ್ಲ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News