×
Ad

ಅಕ್ರಮ ಕಟ್ಟಡ ನಿರ್ಮಾಣ: ರವಿಶಂಕರ್ ಗುರೂಜಿಗೆ ನೋಟಿಸ್ ನೀಡಲು ಹೈಕೋರ್ಟ್ ಆದೇಶ

Update: 2023-12-31 20:02 IST

ಬೆಂಗಳೂರು: ರಾಜಕಾಲುವೆ ಮತ್ತು ಕೆರೆ ಒತ್ತುವರಿ ಮಾಡಿ ಅಪಾರ್ಟ್‍ಮೆಂಟ್ ಕಟ್ಟಡಗಳ ನಿರ್ಮಾಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್ಟ್ ಆಫ್ ಲಿವಿಂಗ್ ಆಶ್ರಮದ  ರವಿಶಂಕರ್ ಗುರೂಜಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ಉಡಿಪಾಳ್ಯದ ಎನ್.ಚಂದ್ರಶೇಖರ್ ಮತ್ತು ಬಿ.ಮಹೇಶ್ ಹಾಗೂ ಸಾಲುಣಸೆಯ ಎಚ್.ಎಸ್.ಮಂಜುನಾಥ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ವಿಚಾರಣೆ ನಡೆಸಿತು.

ರಾಜ್ಯ ಸರಕಾರದ ಕಂದಾಯ ಇಲಾಖೆ ಕಾರ್ಯದರ್ಶಿ, ಬಿಎಂಟಿಎಫ್, ಸುಮೇರು ಗ್ಲೋಬಲ್ ಸಪೋರ್ಟ್ ಸೊಲ್ಯೂಷನ್ ಪ್ರೈವೆಟ್ ಲಿಮಿಟೆಡ್ ಕಂಪೆನಿ ಸೇರಿದಂತೆ ಪ್ರಕರಣದ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಅರ್ಜಿದಾರರ ಆರೋಪದ ಬಗ್ಗೆ ನಿಲುವು ತಿಳಿಸುವಂತೆ ಸರಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News