×
Ad

ಅಕ್ರಮ ಗಣಿಗಾರಿಕೆ : ವಸೂಲಾತಿ ಆಯುಕ್ತರ ನೇಮಕ

Update: 2025-10-09 20:41 IST

ಬೆಂಗಳೂರು, ಅ. 9: ಅಕ್ರಮ ಗಣಿಗಾರಿಕೆಯಿಂದ ಗಳಿಸಿದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು ಮತ್ತು ಜಪ್ತಿಗಾಗಿ ನಿವೃತ್ತ ಐಎಎಸ್ ಅಧಿಕಾರಿ ಜಿ.ವಿ.ಕೃಷ್ಣರಾವು ಅವರನ್ನು ವಸೂಲಾತಿ ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.

ತಕ್ಷಣದಿಂದ ಜಾರಿಗೆ ಬರುವಂತೆ ಕೃಷ್ಣರಾವು ನೇಮಿಸಿಕೊಳ್ಳಲಾಗಿದ್ದು, ಮುಂದಿನ ಆದೇಶದವರೆಗೆ ಅವರು ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ರಾಜ್ಯದಲ್ಲಿ ಗುತ್ತಿಗೆದಾರರು, ಸಾಗಣೆದಾರರು, ರಫ್ತುದಾರರು, ದಾಸ್ತಾನುದಾರರು, ಖರೀದಿದಾರರು ಅಕ್ರಮ ಗಣಿಗಾರಿಕೆ ಚಟುವಟಿಕೆಗಳನ್ನು ನಡೆಸುತ್ತಿದ್ದು, ಅಕ್ರಮವಾಗಿ ಸ್ವತ್ತು ಗಳಿಸಿದ್ದಾರೆ ಎನ್ನಲಾಗಿದೆ.

ಆ ಹಿನ್ನೆಲೆಯಲ್ಲಿ ಅಕ್ರಮವಾಗಿ ಸಂಪಾದಿಸಿದ ಆಸ್ತಿಯನ್ನು ವಶಪಡಿಸಿಕೊಳ್ಳಲು ವಸೂಲಾತಿ ಆಯುಕ್ತರನ್ನು ನೇಮಿಸಬೇಕು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ನೇತೃತ್ವದ ಸಂಪುಟ ಉಪ ಸಮಿತಿ ಸರಕಾರಕ್ಕೆ ಶಿಫಾರಸು ಮಾಡಿತ್ತು. ಹೀಗಾಗಿ ಕೃಷ್ಣರಾವು ಅವರನ್ನು ಆಯುಕ್ತರನ್ನು ನೇಮಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News