×
Ad

ಅಕ್ರಮ ಹಣ ವರ್ಗಾವಣೆ ಪ್ರಕರಣ | ಕೇರಳದ ಮಾಜಿ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರನ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆ

Update: 2023-08-11 23:09 IST

ಬೆಂಗಳೂರು, ಆ.11: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿ ಹಾಗೂ ಕೇರಳದ ಮಾಜಿ ಸಚಿವ,  ಸಿಪಿಎಂ ನಾಯಕ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿ ಅವರ ವಿರುದ್ಧ ಜಾರಿ ನಿರ್ದೇಶನಾಲಯದ(ಈ.ಡಿ) ಪ್ರಕ್ರಿಯೆಗೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬಿನೀಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ಮಾಡಿತು. ಆರೋಪ ನಿಗದಿ ಮಾಡುವ ಪ್ರಕ್ರಿಯೆ ವಿಚಾರಣಾಧೀನ ನ್ಯಾಯಾಲಯದಲ್ಲಿ ಆ.18ರಂದು ನಿಗದಿಯಾಗಿದ್ದು, ಮುಂದಿನ ವಿಚಾರಣೆವರೆಗೆ ತಡೆ ನೀಡಲಾಗಿದೆ.

ಡ್ರಗ್ಸ್ ಜಾಲ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2020ರ ಅ.29ರಂದು ಬಿನೀಶ್ ಅವರನ್ನು ಬಂಧಿಸಲಾಗಿತ್ತು. 2021ರ ಅಕ್ಟೋಬರ್‍ನಲ್ಲಿ ಹೈಕೋರ್ಟ್ ಬಿನೀಶ್‍ಗೆ ಜಾಮೀನು ಮಂಜೂರು ಮಾಡಿತ್ತು. ತಮ್ಮ ವಿರುದ್ಧ ಈ.ಡಿ ನಡೆಸುತ್ತಿದ್ದ ತನಿಖಾ ಪ್ರಕ್ರಿಯೆ ರದ್ದು ಕೋರಿ ಬಿನೀಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News