×
Ad

ಆರೋಗ್ಯದಲ್ಲಿ ಸುಧಾರಣೆ: ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಆಸ್ಪತ್ರೆಯಿಂದ ಬಿಡುಗಡೆ

Update: 2025-10-13 14:19 IST

 ಬೆಂಗಳೂರು, ಅ 13: ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ಕಳೆದ ಒಂದು ವಾರದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡರು ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 

ಚಳಿಜ್ವರ ಮತ್ತು ಮೂತ್ರದ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ಸಲಹೆಯಂತೆ ಮುಂದಿನ ಕೆಲವು ದಿನಗಳು ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.

ಗೌಡರಿಗೆ ಹದಿನೈದು ದಿನ ಸಂಪೂರ್ಣ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದು ಅಭಿಮಾನಿಗಳು ಕಾರ್ಯಕರ್ತರು ಸಹಕರಿಸಲು ಪಕ್ಷದ‌ ಮುಖಂಡರು ಮನವಿ ‌ಮಾಡಿದ್ದಾರೆ‌..

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News