×
Ad

ಶಿವಮೊಗ್ಗದಲ್ಲಿ ಧಗ ಧಗ, ಕೊತ ಕೊತ ಇಲ್ಲ; ಆತಂಕ ಬೇಡ: ಎಸ್ಪಿ ಸ್ಪಷ್ಟನೆ

Update: 2023-10-02 20:30 IST

 ಎಸ್ಪಿ ಮಿಥುನ್‌ ಕುಮಾರ್‌

ಶಿವಮೊಗ್ಗ: ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣ ಸಂಬಂಧ 60 ಮಂದಿಯನ್ನು ಬಂಧಿಸಲಾಗಿದ್ದು, 24 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

ಮಾಧ್ಯಮ ಪ್ರಕಟನೆ ನೀಡಿರುವ ಅವರು, ಘಟನೆಯಲ್ಲಿ ಒಂದು ಕಾರು, ಆಟೋ, ಎರಡು ಬೈಕುಗಳಿಗೆ ಹಾನಿಯಾಗಿದೆ. 7 ಮನೆಗಳ ಮೇಲೆ ಕಲ್ಲು ತೂರಾಟವಾಗಿತ್ತು. ಅರ್ಧ ಗಂಟೆಯಲ್ಲಿ ಪರಿಸ್ಥಿತಿ ಶಾಂತವಾಗಿದೆ. ಶಿವಮೊಗ್ಗ ನಗರದ ಉಳಿದ ಯಾವ ಭಾಗದಲ್ಲಿಯು ಸಮಸ್ಯೆಯಾಗಿಲ್ಲ ಎಂದು ತಿಳಿಸಿದ್ದಾರೆ.

ʼʼಧಗ ಧಗ, ಕೊತ ಕೊತ ಇಲ್ಲʼʼ

ʼʼಸದ್ಯ ಶಿವಮೊಗ್ಗದಲ್ಲಿ ಪರಿಸ್ಥಿತಿ ಶಾಂತವಾಗಿದೆ. ಯಾವುದೆ ಧಗ ಧಗ, ಕೊತ ಕೊತ ಇಲ್ಲ. ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅತ್ಯವಿಲ್ಲʼʼ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News