×
Ad

ಬೆಂಗಳೂರು ಕಂಬಳಕ್ಕೆ ಅಧಿಕೃತ ಚಾಲನೆ

Update: 2023-11-25 12:20 IST

ಬೆಂಗಳೂರು: ಬೆಂಗಳೂರು ಕಂಬಳಕ್ಕೆ ದೀಪ ಬೆಳಗಿಸುವ ಮೂಲಕ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಅಧಿಕೃತ ಚಾಲನೆ ನೀಡಿದ್ದಾರೆ.

ಕಂಬಳದ ಪುನೀತ್ ರಾಜ್ ಕುಮಾರ್ ವೇದಿಕೆ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನವರು ಚಾಲನೆ ನೀಡಿದರು.

ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.

ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ (ನ.25, 26) ಎರಡು ದಿನಗಳ ಕಾಲ ರಾಜ, ಮಹಾರಾಜ ಎಂಬ ಕಂಬಳದ ಕರೆಗಳಲ್ಲಿ ಸ್ಪರ್ಧೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ, ಉಮೇಶ್ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News