×
Ad

ಅತಿಥಿ ಶಿಕ್ಷಕ, ಉಪನ್ಯಾಸಕರ ಗೌರವಧನ ಹೆಚ್ಚಳ

Update: 2025-05-15 21:24 IST

ಸಾಂದರ್ಭಿಕ ಚಿತ್ರ

ಬೆಂಗಳೂರು : ರಾಜ್ಯದ ಸರಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಮಾಸಿಕ ಗೌರವಧನವನ್ನು ಪರಿಷ್ಕರಣೆ ಮಾಡಲಾಗಿದ್ದು, ಮಾಸಿಕ ಗೌರವಧನವನ್ನು ತಲಾ 2 ಸಾವಿರ ರೂ.ಗಳಷ್ಟು ಹೆಚ್ಚಳ ಮಾಡಿದೆ.

ಗುರುವಾರ ರಾಜ್ಯ ಸರಕಾರವು ಆದೇಶ ಹೊರಡಿಸಿದ್ದು, ಈ ಹಿಂದೆ ಸರಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 10 ಸಾವಿರ ರೂ. ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 10,500 ರೂ. ಗೌರವ ಸಂಭಾವನೆಯನ್ನು ನಿಗದಿಪಡಿಸಿತ್ತು. ಇದೀಗ, ಈ ಮೊತ್ತಕ್ಕೆ ಹೆಚ್ಚುವರಿಯಾಗಿ 2 ಸಾವಿರ ರೂ.ಗಳನ್ನು ಸೇರಿಸಲಾಗಿದ್ದು, ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 12 ಸಾವಿರ ರೂ. ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 12,500 ರೂ. ಆಗಲಿದೆ.

ಹಾಗೆಯೇ ಸರಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ 2 ಸಾವಿರ ರೂ.ಗಳಷ್ಟು ಗೌರವಧನ ಹೆಚ್ಚಳವಾಗಿದೆ. ಈ ಹಿಂದೆ ಸರಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ 12 ಸಾವಿರ ರೂ. ನಿಗದಿಯಾಗಿತ್ತು. ಇಂದಿನ ಆದೇಶದಿಂದ ಪರಿಷ್ಕೃತ ಗೌರವ ಸಂಭಾವನೆಯು ಅತಿಥಿ ಉಪನ್ಯಾಸಕರಿಕೆ 14 ಸಾವಿರ ರೂ. ಆಗಲಿದೆ. ಪರಿಷ್ಕೃತ ಗೌರವಧನವು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News