×
Ad

ಯೋಗವನ್ನು ಜಗತ್ತಿಗೆ ಪರಿಚಯಿಸಿದ ಹೆಗ್ಗಳಿಕೆ ಭಾರತಕ್ಕಿದೆ: ಡಿ.ಕೆ ಶಿವಕುಮಾರ್‌

Update: 2024-06-21 10:55 IST

PC:X/dkshivakumar

ಬೆಂಗಳೂರು: ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದ್ದು, ಸಾವಿರಾರು ವರ್ಷಗಳ ಹಿಂದೆಯೇ ಇದನ್ನು ಜಗತ್ತಿಗೆ ಪರಿಚಯಿಸಿದ ಹೆಗ್ಗಳಿಕೆ ಭಾರತ ದೇಶಕ್ಕಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

10 ನೇ ಅಂತಾರಾಷ್ಟ್ರೀಯ ಯೋಗದಿನದ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಆವರಣದಲ್ಲಿ ಆಯುಷ್ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 'ಯೋಗೋತ್ಸವ' ಕಾರ್ಯಕ್ರಮದಲ್ಲಿ ಅವರು ಮಾತನಾಡಿರು.

ನಮಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೋ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿ ನಿತ್ಯ ನಾವು ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ. ಹಾಗಾಗಿ ಯೋಗವನ್ನು ನಮ್ಮ ಜೀವನದ ಒಂದು ಭಾಗವಾಗಿ ರೂಢಿಸಿಕೊಂಡು, ಪ್ರತಿ ದಿನ ಯೋಗ ಮಾಡೋಣ ಹಾಗೂ ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಶಾಸಕ ಶರವಣ, ಕ್ರೀಡಾಪಟುಗಳಾದ ಅಶ್ವಿನಿ ನಾಚಪ್ಪ, ಮನೀಶ್ ಪಾಂಡೆ, ಚಿತ್ರನಟರಾದ ಶರಣ್, ಅನು ಪ್ರಭಾಕರ್ ಸಹಿತ ಇತರ ಗಣ್ಯರು ಭಾಗವಹಿಸಿದ್ದರು.


Delete Edit


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News