×
Ad

ಅಯೋಧ್ಯೆಯಲ್ಲಿ ಶ್ರೀರಾಮ ವಿಗ್ರಹ ಪ್ರತಿಷ್ಠಾಪನೆ; ರಾಜ್ಯಾದ್ಯಂತ ಮುಜರಾಯಿ ದೇವಸ್ಥಾನಗಳಲ್ಲಿ ಜ.22ರಂದು ವಿಶೇಷ ಪೂಜೆ

Update: 2024-01-07 18:21 IST

ಬೆಂಗಳೂರು: ಆಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ನಡೆಯಲಿರುವ ಜ.22ರಂದು ರಾಜ್ಯದ ಮುಜರಾಯಿ ಇಲಾಖೆ ಅಡಿ ಬರುವ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ‘ಜ.22ರ ಮಧ್ಯಾಹ್ನ 12ಗಂಟೆ 29 ನಿಮಿಷ 8 ಸೆಕೆಂಡ್‍ನಿಂದ 12:32ರ ವೇಳೆ ಆಯೋಧ್ಯೆಯಲ್ಲಿ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಅದೇ ಸಮಯದಲ್ಲಿ ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮತ್ತು ಮಹಾಮಂಗಳರತಿ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ’ ಎಂದು ಹೇಳಿದ್ದಾರೆ.

‘ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರಕಾರ. ಆಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮನಿಗೆ ಪ್ರಾಣ ಪ್ರತಿಷ್ಠಾಪನೆ ನಡೆಯುವ ಸುದಿನ, ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲು ರಾಜ್ಯ ಸರಕಾರ ಆದೇಶಿಸಿದೆ. ಇದು ರಾಮಭಕ್ತರ, ಹೋರಾಟಕ್ಕೆ ಸಿಕ್ಕ ಜಯ. ತುಷ್ಟೀಕರಣದ ವಿರುದ್ಧ ಹಿಂದುತ್ವದ ದಿಗ್ವಿಜಯ’ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News