×
Ad

ಸಿಎಂ ಸಿದ್ದರಾಮಯ್ಯ ಕುಟುಂಬದ ಅವಹೇಳನ: ಬಿಜೆಪಿ ಕಾರ್ಯಕರ್ತೆ ಶಕುಂತಲಾ ಪೊಲೀಸ್ ವಶಕ್ಕೆ

Update: 2023-07-28 13:55 IST

ಬೆಂಗಳೂರು : ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಕುರಿತು ಸಿಎಂ ಸಿದ್ದರಾಮಯ್ಯ ಕುಟುಂಬದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆಯನ್ನು ತುಮಕೂರಿನಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ.

'ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ನವರ ಪ್ರಕಾರ ಮಕ್ಕಳಾಟವಂತೆ.. ಸಿದ್ದರಾಮಯ್ಯನವರ ಸೊಸೆ or ಹೆಂಡ್ತಿ ಅವ್ರ ವಿಡಿಯೋವನ್ನು ಇದೆ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ?' ಎಂದು ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಟ್ವೀಟ್ ಮಾಡಿದ್ದರು.

ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಇದೀಗ ತುಮಕೂರಿನ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಬೆಂಗಳೂರಿನ ಪೊಲೀಸರು ಆಕೆಯ ಮನೆಯಿಂದ ವಶಕ್ಕೆ ಪಡೆದುಕೊಂಡಿದ್ದು, ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆನ್ನಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News