×
Ad

‘ಒಳಮೀಸಲಾತಿ’ ಜೂ.2ರಿಂದ 8ರ ವರೆಗೆ ಸಮೀಕ್ಷೆ ಅವಧಿ ವಿಸ್ತರಣೆ

Update: 2025-06-02 01:07 IST

ಸಾಂದರ್ಭಿಕ ಚಿತ್ರ

ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚನೆಯಾಗಿರುವ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಕೈಗೊಂಡಿರುವ ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿ)ವನ್ನು ಜೂ.2ರಿಂದ 8ರ ವರೆಗೆ ವಿಸ್ತರಿಸಿದೆ. ಅಲ್ಲದೆ, ಆನ್‍ಲೈನ್ ಮೂಲಕ ಸ್ವಯಂ ಘೋಷಣೆ ಜೂ.8ರ ವರೆಗೆ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ.

ರವಿವಾರ ಆಯೋಗದ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಗಣತಿದಾರರು ರಜಾ ದಿನಗಳಲ್ಲಿಯೂ ಸಮೀಕ್ಷಾ ಬ್ಲಾಕ್‍ನ ವಿಶೇಷ ಶಿಬಿರಗಳಲ್ಲಿ ಕಾರ್ಯನಿರ್ವಹಿಸಿ ಸಮೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸಮೀಕ್ಷೆ ಪೂರ್ಣಗೊಂಡಿಲ್ಲ ಎಂದು ವಿವಿಧ ಸಂಘಟನೆಗಳ ಮನವಿ ಹಿನ್ನೆಲೆಯಲ್ಲಿ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News