ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಡಿ. ರೂಪಾ ನೇಮಕ
Update: 2023-09-14 17:39 IST
ಬೆಂಗಳೂರು: ಕೆಲ ತಿಂಗಳಿಂದ ಹುದ್ದೆ ನಿರೀಕ್ಷೆಯಲ್ಲಿದ್ದ ಡಿ. ರೂಪಾಗೆ ಆಂತರಿಕ ಭದ್ರತಾ ವಿಭಾಗದ(ಐಎಸ್‌ಡಿ) ಐಜಿಪಿ ಹುದ್ದೆಗೆ ಸರಕಾರ ನಿಯೋಜಿಸಿದೆ.
ಇನ್ನುಳಿದಂತೆ ಮಂಗಳೂರು ಆಯುಕ್ತ ಹುದ್ದೆಯಿಂದ ವರ್ಗಗೊಂಡಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ಬೆಂಗಳೂರು ನಗರ ಪೂರ್ವ ವಿಭಾಗ (ಸಂಚಾರ) ಡಿಸಿಪಿಯಾಗಿ ನೇಮಿಸಿದೆ. ಶಿವಪ್ರಕಾಶ್ ದೇವರಾಜ್ಗೆ ದಕ್ಷಿಣ ವಿಭಾಗ (ಸಂಚಾರ) ಹುದ್ದೆ ನೀಡಿ ಆದೇಶಿಸಿದೆ.