×
Ad

‘ರೇಷ್ಮೆ ಭವನ ನಿರ್ಮಾಣಕ್ಕೆ ಗಣಿಗಾರಿಕೆ ಅಭಿವೃದ್ಧಿ ನಿಗಮದ ಹೂಡಿಕೆ’: ಸಂಪುಟ ಸಭೆಯಲ್ಲಿ ಪ್ರಸ್ತಾವ ಮಂಡಿಸಲು ಸಿಎಂ ಸೂಚನೆ

Update: 2024-01-06 18:34 IST

ಬೆಂಗಳೂರು: ಬೆಂಗಳೂರಿನ ಓಕುಳಿಪುರಂನಲ್ಲಿ ರೇಶ್ಮೆ ಇಲಾಖೆಗೆ ಸೇರಿದ ಜಾಗದಲ್ಲಿ ರೇಷ್ಮೆ ಭವನ ನಿರ್ಮಾಣಕ್ಕೆ ಹೂಡಿಕೆ ಮಾಡಲು ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಮುಂದೆ ಬಂದಿದ್ದು, ಈ ಕುರಿತು ಸವಿವರವಾದ ಪ್ರಸ್ತಾವವನ್ನು ಸಂಪುಟ ಸಭೆಯಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಈ ಯೋಜನೆಯ ರೂಪುರೇಷೆಗಳ ಕುರಿತ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಮುಖ್ಯಮಂತ್ರಿ, ಇದು ನಗರದ ಕೇಂದ್ರ ಭಾಗದಲ್ಲಿರುವುದರಿಂದ ಇದರ ಸದುಪಯೋಗ ಮಾಡಿಕೊಳ್ಳುವ ಕುರಿತು ಸವಿವರ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಇದರಲ್ಲಿ ವ್ಯಾಪಾರಿ ಮಳಿಗೆಗಳು, ಕಚೇರಿಗಳನ್ನು ನಿರ್ಮಿಸಿ, ಬಾಡಿಗೆಗೆ ನೀಡುವ ಮೂಲಕ ಬರುವ ಆದಾಯವನ್ನು ರೇಷ್ಮೆ ಇಲಾಖೆ ಹಾಗೂ ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಹಂಚಿಕೆ ಮಾಡಿಕೊಳ್ಳುವ ಕುರಿತೂ ಮಾಹಿತಿ ಒದಗಿಸುವಂತೆ ಸಿದ್ದರಾಮಯ್ಯ ಸೂಚಿಸಿದರು.

ಸಭೆಯಲ್ಲಿ ರೇಶ್ಮೆ ಸಚಿವ ಕೆ.ವೆಂಕಟೇಶ್, ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News