×
Ad

ಪಶುವೈದ್ಯ, ಪಶು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Update: 2023-11-02 18:31 IST

ಬೆಂಗಳೂರು, ನ. 2: ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸಲು ಒಬ್ಬ ಅರ್ಹ ಪಶುವೈದ್ಯರು ಹಾಗೂ ಪಶುವೈದ್ಯಕೀಯ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳು ಸಂಪೂರ್ಣವಾಗಿ ಗುತ್ತಿಗೆ ಆಧಾರದಲ್ಲಿದ್ದು, ಪಶುವೈದ್ಯರಿಗೆ 50 ಸಾವಿರ ರೂ.ಹಾಗೂ ಪಶುವೈದ್ಯಕೀಯ ಸಹಾಯಕರಿಗೆ 20ಸಾವಿರ ರೂ.ಮಾಸಿಕ ಸಂಭಾವನೆಯನ್ನು ನೀಡಲಾಗುವುದು ಎಂದು ತಿಳಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಅರ್ಜಿಯೊಂದಿಗೆ ರೆಸ್ಯೂಮ್ ಅನ್ನು ನ.10ರ ಸಂಜೆ 5.30ರ ಒಳಗೆ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರ ಕಚೇರಿ, ಶ್ರೀ ಚಾಮರಾಜೇಂದ್ರ ಮೃಗಾಲಯ, ಇಂದಿರಾನಗರ, ಮೈಸೂರು-10 ಇಲ್ಲಿಗೆ ಅಂಚೆಯ ಮೂಲಕ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳನ್ನು ಪ್ರತ್ಯೇಕವಾಗಿ ಸಂದರ್ಶನ ನಡೆಸಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News