×
Ad

7 ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ಬಿಜೆಪಿಗೆ ನಾಚಿಕೆಯಾಗುವುದಿಲ್ಲವೇ?: ಸಿಎಂ ಸಿದ್ದರಾಮಯ್ಯ

Update: 2024-02-29 13:43 IST

ಬೆಂಗಳೂರು : ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ಬಿಜೆಪಿಗೆ ನಾಚಿಕೆಯಾಗುವುದಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, 1.40 ಸಾವಿರ ಕೋಟಿ ರೂ. ನಮ್ಮಿಂದ ಕೇಂದ್ರ ಸರಕಾರಕ್ಕೆ ತೆರಿಗೆ ಹೋಗುತ್ತದೆ. 100 ರೂ. ತೆರಿಗೆ ಕೊಟ್ಟರೆ ನಮಗೆ 12 ರೂ.ಗಳು ಮಾತ್ರ ಕೇಂದ್ರದಿಂದ ತೆರಿಗೆ ಬರುತ್ತಿದೆ. ಇದನ್ನು ಸಮರ್ಥಿಸಿಕೊಳ್ಳಲು ಬಿಜೆಪಿಗೆ ನಾಚಿಕೆಯಾಗಬೇಕು ಎಂದರು.

ಕಾಳಜಿ ಇದೆಯೇ?

14ನೇ ಹಣಕಾಸು ಆಯೋಗದಲ್ಲಿ ಶೇ. 4.7  ಹಾಗೂ 15ನೇ ಹಣಕಾಸು ಆಯೋಗದಲ್ಲಿ ಶೇ. 3.64 ರಾಜ್ಯಕ್ಕೆ ನಿಗಧಿಯಾಗಿ ಶೇ. 1.07ರಷ್ಟು ಕಡಿಮೆಯಾಗಿದೆ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ 2 ನೇ ರಾಜ್ಯವಾಗಿರುವ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯವಾಗಿದೆ. ಕೇಂದ್ರದ ಅನ್ಯಾಯವನ್ನು ಬೆಂಬಲಿಸುವ ಬಿಜೆಪಿಗೆ ಕನ್ನಡಿಗರ ಬಗ್ಗೆ ಕಾಳಜಿ ಇದೆಯೇ ಎಂದು ಪ್ರಶ್ನಿಸಿದರು.

ನಿಮ್ಮದು ನಿಃಶಕ್ತಿ

ಇದೇ ವೇಳೆಗೆ ಮೋದಿ ಮೋದಿ, ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತಿದ್ದ ವಿರೋಧಪಕ್ಷದವರನ್ನು ಉದ್ದೇಶಿಸಿ ನಿಮ್ಮದು ಕೇವಲ ನಿಃಶಕ್ತಿ. ಮೋದಿ ಹೆಸರಿನ ಮೇಲೆ ನಡೆಸುತ್ತಿದ್ದೀರಿ. ಸಮಾಜ ಒಡೆಯುವ ಕೆಲಸ ನಿಮ್ಮದು. ನಾವು ಜೈ ಸೀತಾರಾಮ್ ಎನ್ನುತ್ತೇವೆ ಎಂದು ಮುಖ್ಯಮಂತ್ರಿಗಳು ಘೋಷಣೆ ಕೂಗಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News