×
Ad

ʼಅರಣ್ಯ ಇಲಾಖೆ ಹುದ್ದೆಗಳಿಗೆ ಬಿಎಸ್ಸಿ ಅರಣ್ಯಶಾಸ್ತ್ರ ಕನಿಷ್ಠ ವಿದ್ಯಾರ್ಹತೆ ಬೇಡಿಕೆʼ ಸರಕಾರದ ಹಂತದಲ್ಲಿ ಚರ್ಚೆ : ಸಚಿವ ಈಶ್ವರ್ ಖಂಡ್ರೆ

Update: 2025-11-04 18:53 IST

ಬೆಂಗಳೂರು : ಅರಣ್ಯ ಇಲಾಖೆಯ ಹುದ್ದೆಗಳಿಗೆ ಬಿಎಸ್ಸಿ ಅರಣ್ಯಶಾಸ್ತ್ರ ಕನಿಷ್ಠ ವಿದ್ಯಾರ್ಹತೆ ಪರಿಗಣಿಸಬೇಕೆಂಬ ಬೇಡಿಕೆ ಕುರಿತು ಸರಕಾರದ ಹಂತದಲ್ಲಿ ಚರ್ಚಿಸಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಉಪವಲಯ ಅರಣ್ಯಾಧಿಕಾರಿ ಹುದ್ದೆಯ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯಶಾಸ್ತ್ರವನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರರ ಅಸೋಸಿಯೇಶನ್ ವತಿಯಿಂದ ನಗರದ ಫ್ರೀಡಂ ಪಾರ್ಕ್‍ನಲ್ಲಿ ನಡೆಯುತ್ತಿದ್ದ ಧರಣಿ ಸ್ಥಳಕ್ಕೆ ಖುದ್ದು ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು.

ಈ ಹಿಂದೆ ಧರಣಿ ಸತ್ಯಾಗ್ರಹ ಮಾಡಿದ್ದೀರಿ, ನಾನು ಆಗ ತಜ್ಞರ ಸಮಿತಿಯ ವರದಿ ಬಂದ ಮೇಲೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದೆ, ಆದರೆ ಏಕಾಏಕಿ ಪ್ರತಿಭಟನೆ ಮಾಡುವುದು ಸರಿಯಲ್ಲ. ಸರಕಾರದ ವತಿಯಿಂದ ಉದ್ಯೋಗ ಸಿಗಬೇಕು. ಮೀಸಲಾತಿ ಪ್ರಮಾಣ ಹೆಚ್ಚು ಮಾಡಬೇಕು ಎಂದು ಮನವಿ ಕೊಟ್ಟಿದ್ದು, ಅದನ್ನು ಪರಿಶೀಲನೆ ಮಾಡಲಾಗುವುದು. ಧರಣಿ ನಿಲ್ಲಿಸಿ, ಕಾಲೇಜುಗಳಿಗೆ ಹೋಗಿ ಎಂದು ಅವರು ಮನವಿ ಮಾಡಿದರು.

ಧರಣಿಯಲ್ಲಿ ಅರಣ್ಯಶಾಸ್ತ್ರ ವಿದ್ಯಾರ್ಥಿಗಳಾದ ದೀಕ್ಷಿತ್ ಎಂ.ಬಿ, ಅಕ್ಷಯ್ ಕುಮಾರ್, ಸುದೀಪ್ ಸಿರಿಗೌಡ, ಅಂಕಿತ್ ದೇವರಾಯ ಮತ್ತಿತರರು ಹಾಜರಿದ್ದರು.

‘ತಜ್ಞರ ಸಮಿತಿಯ ವರದಿ ಬಂದಿಲ್ಲ, ವರದಿ ಬಂದ ಮೇಲೆ ತೀರ್ಮಾನ ಮಾಡೋಣ. ಧರಣಿ ಮಾಡುವುದು ಬೇಡ. ನಿಮ್ಮ ಮನವಿಯನ್ನು ಅರಣ್ಯ ಸಚಿವರಿಗೆ ತಿಳಿಸಿ’

-ಎ.ಎಸ್.ಪೊನ್ನಣ್ಣ, ಸಿಎಂ ಕಾನೂನು ಸಲಹೆಗಾರ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News