×
Ad

ಗ್ರಾಮೀಣ ಕುಡಿಯುವ ನೀರಿಗೆ 117 ಕೋಟಿ ರೂ.ಬಿಡುಗಡೆ : ಈಶ್ವರ್ ಖಂಡ್ರೆ

Update: 2026-07-02 18:53 IST

ಬೆಂಗಳೂರು : ‘ಎಲ್ ನಿನೋ’ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಕೊರತೆ ಆಗಿದ್ದು, ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಮುಂಗಡವಾಗಿ 117ಕೋಟಿ ರೂ.ಬಿಡುಗಡೆ ಮಾಡಲಾಗಿದೆ, ನೀರು ಪೂರೈಕೆಗೆ ಹಣದ ಕೊರತೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸುಮಾರು 85 ಕೋಟಿ ರೂ.ಗಳಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ. 30 ಕೋಟಿ ರೂ.ವೆಚ್ಚ ಮಾಡಲಾಗಿದ್ದು, ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.

ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆಗಳ ಒಳಗಾಗಿ ಪರಿಹರಿಸುವಂತೆ ಸೂಚಿಸಲಾಗಿದೆ. ಖಾಸಗಿ ತೆರೆದ ಬಾವಿ, ಬೋರ್ ವೆಲ್ ಗಳಿಂದ ನೀರು ಪಡೆದು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ತೀರಾ ಅಗತ್ಯಬಿದ್ದ ಸಂದರ್ಭದಲ್ಲಿ ಮಾತ್ರ ಕೊಳವೆ ಬಾವಿ ಕೊರೆಸಲಾಗುತ್ತಿದೆ ಎಂದು ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು.

ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಕಳೆದ 2-3 ದಿನದಿಂದ ಮಳೆ ಆಗುತ್ತಿದ್ದು, ಕೆಲವು ಜಲಾಶಯಗಳಿಗೆ ನೀರು ಬರುತ್ತಿದೆ. ಈ ಸಂಕಷ್ಟದ ಸಮಯದಲ್ಲಿ ಜೀವಜಲವನ್ನು ಹಿತಮಿತವಾಗಿ ಜನರು ಬಳಸಬೇಕು. ಪೋಲು ಮಾಡಬಾರದು ಎಂದು ಮನವಿ ಮಾಡಿದ ಅವರು, ಪಂಚಾಯ್ತಿಗಳು ನೀರು ಸೋರಿಕೆ ಆಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News